ಗಾಯಕ್ಕೆ ಮಹಿಳಾ ನರ್ಸ್ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆ: ಇಬ್ಬರು ಯುವಕರ ಬಂಧನ

ರಸ್ತೆ ಅಪಘಾತದಲ್ಲಿ ತಮಗೆ ಗಾಯಗಳಾಗಿವೆ ಎಂದು ಹೇಳಿಕೊಂಡು ಆಸ್ಪತ್ರೆಗೆ ಆಗಮಿಸಿದ ಇಬ್ಬರು ಯುವಕರು, ಮಹಿಳಾ ನರ್ಸ್ ಗಳು ಮಾತ್ರ ಚಿಕಿತ್ಸೆ ನೀಡಬೇಕೆಂದು ಒತ್ತಾಯಿಸಿ ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಸ್ತೆ ಅಪಘಾತದಲ್ಲಿ ತಮಗೆ ಗಾಯಗಳಾಗಿವೆ ಎಂದು ಹೇಳಿಕೊಂಡು ಆಸ್ಪತ್ರೆಗೆ ಆಗಮಿಸಿದ ಇಬ್ಬರು ಯುವಕರು, ಮಹಿಳಾ ನರ್ಸ್ ಗಳು ಮಾತ್ರ ಚಿಕಿತ್ಸೆ ನೀಡಬೇಕೆಂದು ಒತ್ತಾಯಿಸಿ ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ.

ಬುಧವಾರ ಸಂಜೆ ಬೆಂಗಳೂರಿನ ಕಗ್ಗದಾಸಪುರದ ನಾಗಪ್ಪ ರೆಡ್ಡಿ ಲೇಔಟ್ ನಲ್ಲಿರುವ ವ ಶ್ರೀ ಲಕ್ಷ್ಮಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನ ಉಸ್ತುವಾರಿ ವಹಿಸಿರುವ ಪ್ರಸಾದ್ ಎಂಬಿ ಈ ಬಗ್ಗೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ಬುಧವಾರ ಸಂಜೆ 4.15 ರ ಸುಮಾರಿಗೆ ಕಿರಣ್ ಕುಮಾರ್ ಮತ್ತು ಹೇಮಂತ್ ಎಂಬ ಇಬ್ಬರು ಯುವಕರು ಆಸ್ಪತ್ರೆಗೆ ಆಗಮಿಸಿದಾಗ ಈ ಘಟನೆ ನಡೆದಿದೆ. ಅವರು ಪುರುಷ ನರ್ಸ್ ಗಳಿಂದ ಚಿಕಿತ್ಸೆ ಪಡೆಯಲು ನಿರಾಕರಿಸುತ್ತಿದ್ದರು, ”ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ, ಯುವಕರು ಸಿಬ್ಬಂದಿಯ ವಿರುದ್ಧ ಕೆಟ್ಟ ನಿಂದನಾತ್ಮಕ ಮಾತುಗಳನ್ನಾಡಿದ್ದಾರೆ.ಮಹಿಳಾ ದಾದಿಯರು ಮಾತ್ರ ಚಿಕಿತ್ಸೆ ನೀಡಬೇಕೆಂದು ಒತ್ತಾಯಿಸಿದರು.. ಶುಶ್ರೂಷೆ ನೀಡಲು ಯತ್ನಿಸಿದ ಪುರುಷ ನರ್ಸ್ ಪ್ರಶಾಂತ್ ಮೇಲೆ ಹೇಮಂತ್ ಹಲ್ಲೆ ಮಾಡಿದ್ದಾರೆ. ಹೇಮಂತ್ ಕೂಡ ತನ್ನ ಸ್ನೇಹಿತರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಆಸ್ಪತ್ರೆಗೆ ಬರಲು ಹೇಳಿದ್ದು, ಸಿಬ್ಬಂದಿ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸುಳ್ಳು ಹೇಳಿದ್ದಾರೆ. ಕೆಲವೇ ನಿಮಿಷಗಳಲ್ಲಿ, ಇನ್ನಿಬ್ಬರು ಬಂದು ಸಿಬ್ಬಂದಿಯೊಂದಿಗೆ ಜಗಳವಾಡಿದರು.

ದೂರುದಾರ, ಪ್ರಶಾಂತ್ ಮತ್ತು ಸೆಕ್ಯುರಿಟಿ ಗಾರ್ಡ್ ಮೇಲೆ ಗ್ಯಾಂಗ್ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಲ್ಲಿಂಗ್ ಕೌಂಟರ್‌ನ ಸಿಬ್ಬಂದಿ ಮಧ್ಯಪ್ರವೇಶಿಸಿದಾಗ, ದುಷ್ಕರ್ಮಿಗಳು ಅವರಿಗೆ ಭೀಕರ ಪರಿಣಾಮದ ಬಗ್ಗೆ ತೆ ಬೆದರಿಕೆ ಹಾಕಿ ಆಸ್ಪತ್ರೆಯಿಂದ ಹೊರಹೋಗಿದ್ದಾರೆ. ಬೈಯಪ್ಪನಹಳ್ಳಿ ಪೋಲೀಸರು ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com