ಕೋವಿಡ್-19: ರಾಜ್ಯದಲ್ಲಿ ಇಳಿಯದ ಸಾವಿನ ಪ್ರಮಾಣ; 2 ವರ್ಷದ ಮಗು ಸೇರಿ ಒಂದೇ ದಿನ 340 ಮಂದಿ ಕೊರೋನಾಗೆ ಬಲಿ

ರಾಜ್ಯದಲ್ಲಿ ಹೊಸ ಸೋಂಕು ಪ್ರಕರಣಗಳು ಇಳಿಕೆಯಾದರೂ, ಸಾವಿನ ಪ್ರಮಾಣ ಮಾತ್ರ ಇಳಿಕೆಯಾಗುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊಪ್ಪಳ ಮೂಲದ 2 ವರ್ಷದ ಮಗು ಸೇರಿ 340 ಮಂದಿ ಸಾವನ್ನಪ್ಪಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಹೊಸ ಸೋಂಕು ಪ್ರಕರಣಗಳು ಇಳಿಕೆಯಾದರೂ, ಸಾವಿನ ಪ್ರಮಾಣ ಮಾತ್ರ ಇಳಿಕೆಯಾಗುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊಪ್ಪಳ ಮೂಲದ 2 ವರ್ಷದ ಮಗು ಸೇರಿ 340 ಮಂದಿ ಸಾವನ್ನಪ್ಪಿದ್ದಾರೆ.     

ಕೊಪ್ಪಳ ಮೂಲದ 2 ವರ್ಷದ ಗಂಡು ಮಗು ಶ್ವಾಸಕೋಶದ ಅತೀವ್ರ ಸೋಂಕು, ಜ್ವರ ಹಾಗೂ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು, ಮೇ.31 ರಂದು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ನಿನ್ನೆ ಕೊನೆಯುಸಿರೆಳೆದಿದೆ. 

ಇದರೊಂದಿಗೆ ರಾಜ್ಯದಲ್ಲಿ 2 ವರ್ಷದ ಮಗು ಸೇರಿದಂತೆ ಒಟ್ಟು 340 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖಅಯೆ 31,920ಕ್ಕೆ ಏರಿಕೆಯಾಗಿದೆ. 

ಈ ನಡುವೆ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದ್ದು, ಸೋಮವಾರ 11,958 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,07,481ಕ್ಕೆ ತಲುಪಿದೆ. 

ರಾಜ್ಯದಲ್ಲಿ 0-9 ವರ್ಷದ 81,520 ಮಕ್ಕಳಿಕೆ ಸೋಂಕು ತಗುಲಿದ್ದು, 10-19 ವರ್ಷದ 2,03,526 ಮಕ್ಕಳಿಗೆ ಸೋಂಕು ತಗುಲಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ಅಲ್ಲದೆ, 0-9 ವರ್ಷದ 60 ಮಕ್ಕಳು, 10-19 ವರ್ಷದ 83 ಮಕ್ಕಳು ಮಹಾಮಾರಿ ಸೋಂಕಿಗೆ ಬಲಿಯಾಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com