ಬೆಂಗಳೂರು ತಲುಪಿದ 29ನೇ ಆಕ್ಸಿಜನ್ ಎಕ್ಸ್ ಪ್ರೆಸ್: 126.7 ಮೆಟ್ರಿಕ್ ಟನ್ ಪ್ರಾಣವಾಯು ಆಗಮನ

29ನೇ ಆಕ್ಸಿಜನ್ ಎಕ್ಸ್ ಪ್ರೆಸ್ ವಿಶೇಷ ರೈಲು ಇಂದು ಬೆಂಗಳೂರಿಗೆ ಆಗಮಿಸಿದೆ. 126.7 ಮೆಟ್ರಿಕ್ ಟನ್ ವೈದ್ಯಕೀಯ ಲಿಕ್ವಿಡ್ ಆಕ್ಸಿಜನ್ ಹೊತ್ತ ಈ ಎಕ್ಸ್ ಪ್ರೆಸ್ ರೈಲು ಬೆಂಗಳೂರಿನ ವೈಟ್ ಫೀಲ್ಡ್  ಕಂಟೈನರ್ ಡಿಪೋ ತಲುಪಿರುವುದಾಗಿ ಪ್ರಸಾರ ಭಾರತಿ ಟ್ವೀಟ್ ಮಾಡಿದೆ. 
ಆಕ್ಸಿಜನ್ ಎಕ್ಸ್ ಪ್ರೆಸ್
ಆಕ್ಸಿಜನ್ ಎಕ್ಸ್ ಪ್ರೆಸ್

ಬೆಂಗಳೂರು: 29ನೇ ಆಕ್ಸಿಜನ್ ಎಕ್ಸ್ ಪ್ರೆಸ್ ವಿಶೇಷ ರೈಲು ಇಂದು ಬೆಂಗಳೂರಿಗೆ ಆಗಮಿಸಿದೆ. 126.7 ಮೆಟ್ರಿಕ್ ಟನ್ ವೈದ್ಯಕೀಯ ಲಿಕ್ವಿಡ್ ಆಕ್ಸಿಜನ್ ಹೊತ್ತ ಈ ಎಕ್ಸ್ ಪ್ರೆಸ್ ರೈಲು ಬೆಂಗಳೂರಿನ ವೈಟ್ ಫೀಲ್ಡ್ ಕಂಟೈನರ್ ಡಿಪೋ ತಲುಪಿರುವುದಾಗಿ ಪ್ರಸಾರ ಭಾರತಿ ಟ್ವೀಟ್ ಮಾಡಿದೆ. 

ಒಡಿಶಾದ ರೂರ್ಕೆಲಾದಿಂದ ನಿನ್ನೆ ಹೊರಟ ಈ ರೈಲು ಒಟ್ಟು 6 ಕ್ರಯೋಜೆನಿಕ್ (cryogenic) ಕಂಟೇನರ್​ಗಳ ಮೂಲಕ 126 ಒಟ್ಟು 126.7 ಮೆಟ್ರಿಕ್ ಟನ್​ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಹೊತ್ತು ತಂದಿದೆ.

ಇದುವರೆಗೆ ರಾಜಧಾನಿ ಬೆಂಗಳೂರಿಗೆ 29 ರೈಲುಗಳ ಮೂಲಕ 3,340.69 ಟನ್ ದ್ರವ ವೈದ್ಯಕೀಯ ಆಮ್ಲಜನಕ ತರಲಾಗಿದೆ. ಈ ಮೂಲಕ ಕೋವಿಡ್-19 ರೋಗಿಗಳಿಗೆ ಅತ್ಯವಶ್ಯಕವಾದ ಪ್ರಾಣವಾಯು ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com