ಜಿಂದಾಲ್ ಸ್ಟೀಲ್‌ಗೆ ಭೂಮಿ ‘ಮಾರಾಟ’ದ ಬಗ್ಗೆ ಸರ್ಕಾರದಿಂದ ದಾಖಲೆ ಕೇಳಿದ ಹೈಕೋರ್ಟ್
3,677 ಎಕರೆ ಭೂಮಿಯನ್ನು ಜೆಎಸ್‌ಡಬ್ಲ್ಯು ಸ್ಟೀಲ್ ಪ್ರೈವೇಟ್ ಲಿಮಿಟೆಡ್‌ಗೆ ಮಾರಾಟ ಮಾಡುವ ನಿರ್ಧಾರದ ಬಗ್ಗೆ ಕರ್ನಾಟಕ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೇಳಿದೆ. ಅಲ್ಲದೆ ಸರ್ಕಾರವು ಅದರ ನಿರ್ಧಾರಕ್ಕೆ ಪೂರಕವಾಗಿ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವಂತೆ ನಿರ್ದೇಶಿಸಿದೆ.
Published: 08th June 2021 08:37 AM | Last Updated: 08th June 2021 08:37 AM | A+A A-

ಹೈಕೋರ್ಟ್
ಬೆಂಗಳೂರು: 3,677 ಎಕರೆ ಭೂಮಿಯನ್ನು ಜೆಎಸ್‌ಡಬ್ಲ್ಯು ಸ್ಟೀಲ್ ಪ್ರೈವೇಟ್ ಲಿಮಿಟೆಡ್‌ಗೆ ಮಾರಾಟ ಮಾಡುವ ನಿರ್ಧಾರದ ಬಗ್ಗೆ ಕರ್ನಾಟಕ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೇಳಿದೆ. ಅಲ್ಲದೆ ಸರ್ಕಾರವು ಅದರ ನಿರ್ಧಾರಕ್ಕೆ ಪೂರಕವಾಗಿ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವಂತೆ ನಿರ್ದೇಶಿಸಿದೆ.
ನಗರದ ಬಿಎಂ ಲೇಔಟ್ ನ ನಿವಾಸಿ ಕೆ.ಎ.ಪಾಲ್ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠ ಈ ಆದೇಶವನ್ನು ನೀಡಿದೆ.
ಮುಖ್ಯ ಕಾರ್ಯದರ್ಶಿ, ಹಣಕಾಸು, ಗೃಹ ಮತ್ತು ಕಂದಾಯ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಕಾನೂನು, ಗಣಿ ಮತ್ತು ಭೂವಿಜ್ಞಾನ ಮತ್ತು ಅರಣ್ಯ, ಪರಿಸರ ಮತ್ತು ಪರಿಸರ ವಿಜ್ಞಾನ ವಿಭಾಗಗಳ ಪ್ರಧಾನ ಕಾರ್ಯದರ್ಶಿಗಳಿಗೆ ನ್ಯಾಯಾಲಯ ನೋಟಿಸ್ ನೀಡಿದೆ.
3,677 ಎಕರೆ ಭೂಮಿಯನ್ನು ಬಳ್ಳಾರಿಯ ಜೆಎಸ್‌ಡಬ್ಲ್ಯುಗೆ ಎಕರೆಗೆ 1.22 ಲಕ್ಷ ರೂ.ಗಳ “ಅಲ್ಪ ಬೆಲೆಗೆ” ಮಾರಾಟ ಮಾಡುವ ನಿರ್ಧಾರವನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.