ಬಿಡಿಎಗೆ ಪ್ರತ್ಯೇಕ ಪೊಲೀಸ್ ಠಾಣೆ: ಸಿಎಂ ಯಡಿಯೂರಪ್ಪ ಭರವಸೆ

ಬಿಡಿಎ ಬಹುದಿನಗಳ ಕೋರಿಕೆಯಂತೆ ಬಿಡಿಎಗೆ ಪ್ರತ್ಯೇಕ ಪೊಲೀಸ್ ಠಾಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಗಳವಾರ ಭರವಸೆ ನೀಡಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬಿಡಿಎ ಬಹುದಿನಗಳ ಕೋರಿಕೆಯಂತೆ ಬಿಡಿಎಗೆ ಪ್ರತ್ಯೇಕ ಪೊಲೀಸ್ ಠಾಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಗಳವಾರ ಭರವಸೆ ನೀಡಿದ್ದಾರೆ. 

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಬಿಡಿಎ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು: ಬಿಡಿಎ ಬಹುದಿನಗಳ ಕೋರಿಕೆಯಂತೆ ಬಿಡಿಎಗೆ ಪ್ರತ್ಯೇಕ ಪೊಲೀಸ್ ಠಾಣೆ ನೀಡಲಾಗುವುದು ಎಂದು ಹೇಳಿದ್ದಾರೆ. ಈ ಮೂಲಕ ಬಿಡಿಎಗೆ ಬರುವ ದೂರುಗಳನ್ನು ಈ ಠಾಣೆಯಲ್ಲಿ ಸ್ವೀಕರಿಸಿ, ತನಿಖೆ ನಡೆಸುವುದು ಸೇರಿದಂತೆ ಅಗತ್ಯ ಮಾನ್ಯತೆ ದೊರೆಯಲಿದೆ. ಪ್ರಸ್ತುತ ಬಿಡಿಎಗೆ ಸಂಬಂಧಿಸಿದ ಯಾವುದೇ ಪ್ರಕರಣವಿದ್ದರೂ ಶೇಷಾದ್ರಿಪುರ ಠಾಣೆಯಲ್ಲಿ ದಾಖಲಿಸಬೇಕಿದೆ ಎಂದು ಬಿಡಿಎ ಮೂಲಗಳು ಮಾಹಿತಿ ನೀಡಿವೆ. 

ಸಭೆ ವೇಳೆ ಬಿಡಿಎ ಅಧಿಕಾರಿಗಳಿಗೆ ಕೆಲ ಪ್ರಮುಖ ಸೂಚನೆಗಳನ್ನೂ ಯಡಿಯೂರಪ್ಪ ಅವರು ನೀಡಿದ್ದಾರೆ. ಪೆರಿಫೆರಲ್ ರಿಂಗ್ ರಸ್ತೆ ಯೋಜನೆಯ ಅನುಷ್ಠಾನಕ್ಕೆ ಟರ್ಕಿ, ಇಸ್ರೇಲ್ ಹಾಗೂ ಸ್ವಿಸ್ ದೇಶಗಳ ಕಂಪನಿಗಳು ಆಸಕ್ತಿ ತೋರಿವೆ. ಶೀಘ್ರವಾಗಿ ಟೆಂಡರ್ ಅಂತಿಮಗೊಳಿಸಿ ಸಚಿವ ಸಂಪುಟದ ಅನುಮೋದನೆ ಪಡೆದು ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಿ, ನಾಡಪ್ರಭು ಕೆಂಪೇಗೌಡ ಬಡಾವಣೆ ಹಾಗೂ ಡಾ.ಕೆ.ಶಿವರಾಮ ಕಾರಂತ ಬಡಾವಣೆಗಳಲ್ಲಿ ಮೂಲ ಸೌಲಭ್ಯಗಳಾದ ಒಳಚರಂಡಿ, ವಿದ್ಯುತ್ ಸಂಪರ್ಕ ರಸ್ತೆ ಮುಂತಾದ ಅಭಿವೃದ್ಧಿ ಕಾರ್ಯಕ್ಕೆ ವೇಗ ನೀಡಿ ಎಂದು ಸೂಚಿಸಿದರು. 

ಮಳೆಗಾರ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಬೆಳ್ಳಂದೂರು ಮತ್ತು ವರ್ತೂರು ಕೆರೆಗಳ ಹೂಳೆತ್ತಿ ವಿಲೇವಾರಿ ಮಾಡುವ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಚಿಕ್ಕಬಾಣಾವರ, ಕೊಮ್ಮಘಟ್ಟ ಹಾಗೂ ರಾಮಸಂದ್ರ ಕೆರೆಗಳ ಅಭಿವೃದ್ಧಿಗೂ ಆದ್ಯತೆ ನೀಡಬೇಕು. ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ಲ್ಯಾಂಡ್ ಆಡಿಟ್ ಸಮೀಕ್ಷೆ ವರದಿಯಂತೆ ಪ್ರಾಧಿಕಾರಕ್ಕೆ ಲಭ್ಯವಿರುವ ಒಟ್ಟು ಆಸ್ತಿಯ ಕುರಿತ ಮಾಹಿತಿ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ಬಿಡಿಎ ಖಾಲಿ ನಿವೇಶನಗಳು, ಪ್ಲಾಟ್ ಗಳು ಹಾಗೂ ಮೂಲೆ ನಿವೇಶನಗಳ ಹರಾಜು ಪ್ರಕ್ರಿಯೆಯನ್ನು ಚುರುಕುಗೊಳಿಸಿ, ಪ್ರಾಧಿಕಾರದ ಆದಾಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಬಿಡಿಎ ಕಳೆದ ಸಾಲಿನಲ್ಲಿ ರೂ.2,066.72 ಆದಾಯ ಗಳಿಸಿದ್ದು, 1,332.44 ಕೋಟಿ ವೆಚ್ಚವಾಗಲಿದೆ. ಈ ಬಾರಿ ರೂ.9530 ಕೋಟಿಗಳ ಆದಾಯವನ್ನು ನಿರೀಕ್ಷಿಸಲಾಗಿದೆ. ಜೊತೆಗೆ ಬಿಡಿಎಗೆ ಸೇರಿದ ವಾಣಿಜ್ಯ ಸಂಕೀರ್ಣಗಳನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವಕ ಕುರಿತು ಪರಿಶೀಲಿಸಬೇಕೆಂದು ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com