ಕೋವಿಡ್ ಮೂರನೇ ಅಲೆ ಮಕ್ಕಳ ಮೇಲೆ ಪ್ರಭಾವ; ಜೂನ್ 25 ರಿಂದ ಮಕ್ಕಳ ಆರೋಗ್ಯ ತಪಾಸಣೆ: ಬೊಮ್ಮಾಯಿ

ಕೋವಿಡ್ ಮೂರನೇ ಅಲೆಯು ಮಕ್ಕಳ ಮೇಲೆ ಪ್ರಭಾವ ಬೀರುತ್ತಿದೆ ಎಂಬ ಕೆಲ ತಜ್ಞರ ವರದಿಗಳ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಸದೃಢತೆಗಾಗಿ ಇದೇ ತಿಂಗಳ 25 ರಿಂದ ಸತತ ಮೂರು ತಿಂಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳವಾರು ಮಕ್ಕಳ ಆರೋಗ್ಯ ತಪಾಸಣೆ ಕಾರ್ಯಕ್ರಮ  ಹಮ್ಮಿಕೊಳ್ಳಲಾಗುವುದು ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಗೃಹ ಸಚಿವ ಬೊಮ್ಮಾಯಿ
ಗೃಹ ಸಚಿವ ಬೊಮ್ಮಾಯಿ

ಹಾವೇರಿ: ಕೋವಿಡ್ ಮೂರನೇ ಅಲೆಯು ಮಕ್ಕಳ ಮೇಲೆ ಪ್ರಭಾವ ಬೀರುತ್ತಿದೆ ಎಂಬ ಕೆಲ ತಜ್ಞರ ವರದಿಗಳ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಸದೃಢತೆಗಾಗಿ ಇದೇ ತಿಂಗಳ 25 ರಿಂದ ಸತತ ಮೂರು ತಿಂಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳವಾರು ಮಕ್ಕಳ ಆರೋಗ್ಯ ತಪಾಸಣೆ ಕಾರ್ಯಕ್ರಮ  ಹಮ್ಮಿಕೊಳ್ಳಲಾಗುವುದು ಎಂದು ಗೃಹ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಎರಡನೇ ಅಲೆಯು ಜೂನ್ ತಿಂಗಳಲ್ಲಿ ಕಡಿಮೆಯಾಗುವುದಾಗಿ ತಜ್ಞರ ಅಭಿಪ್ರಾಯಗಳು ವ್ಯಕ್ತವಾಗಿದೆ. ಮೂರನೇ ಅಲೆಯು ಆರಂಭವಾಗುವ ಮುನ್ನ ಮಕ್ಕಳ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಮಕ್ಕಳ ಆರೋಗ್ಯ ಸದೃಢತೆಗೆ ಆದ್ಯತೆ  ನೀಡಲಾಗುವುದು. ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆಕೈಗೊಂಡು ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆ, ರೋಗನಿರೋಧ ಶಕ್ತಿಯನ್ನು ಮಕ್ಕಳಲ್ಲಿ ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೇಳಿದರು.

ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ತಿಂಗಳೊಳಗಾಗಿ 50 ವೆಂಟಿಲೇಟರ್ ಸೌಲಭ್ಯಗಳನ್ನು ಕಲ್ಪಿಸಲು ನಿರ್ಧರಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಎಂಟು ವೆಂಟಿಲೇಟರ್ ಗಳನ್ನು ಜಿಲ್ಲೆಗೆ ಕಳುಹಿಸಲು ಮನವಿಮಾಡಿಕೊಳ್ಳಲಾಗಿದೆ. ಸರ್ಕಾರ ಮತ್ತು ದಾನಿಗಳ ನೆರವಿನಿಂದ 50 ವೆಂಟಿಲೇಟರ್  ಗಳ ಸೌಕರ್ಯವನ್ನು ಕಲ್ಪಿಸಲಾಗುವುದು. ಜಿಲ್ಲಾ ಆಸ್ಪತ್ರೆಯಲ್ಲಿ 32 ವೆಂಟಿಲೇಟರ್‍ಗಳ ವ್ಯವಸ್ಥೆ ಇದ್ದು, ಧರ್ಮಸ್ಥಳದಿಂದ ಮೂರು ವೆಂಟಿಲೇಟರ್‍ಗಳನ್ನು ದಾನಮಾಡಿದ್ದಾರೆ. ಸರ್ಕಾರದಿಂದ ಎಂಟು ವೆಂಟಿಲೇಟರ್‍ಗಳು ಬರಲಿವೆ. ಉಳಿದಂತೆ ಸರ್ಕಾರ ಮತ್ತು ದಾನಿಗಳ ನೆರವಿನಿಂದ ಕನಿಷ್ಠ 50 ವೆಂಟಿಲೇಟರ್ ವ್ಯವಸ್ಥೆಯನ್ನು  ಜಿಲ್ಲಾ ಆಸ್ಪತ್ರೆಯಲ್ಲಿ ಮಾಡಲಾಗುವುದು. ವೆಂಟಿಲೇಟರ್ ನಿರ್ವಹಣೆಗೆ ಅಗತ್ಯವಾದ ಹೆಚ್ಚುವರಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ನೇಮಕಾತಿ ಹಾಗೂ ಅಗತ್ಯ ತರಬೇತಿ ವ್ಯವಸ್ಥೆ ಸಹ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com