ಪರಿಹಾರ ಪಡೆಯಲು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಾವಣಿ ಕಡ್ಡಾಯ: ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ 'ಹೈ' ಸೂಚನೆ

ಪರಿಹಾರ ಪಡೆಯಲು ಸೇನಾ ಸಿಂಧು ಪೋರ್ಟಲ್ ನಲ್ಲಿ ನೋಂದಾವಣಿ ಮಾಡುವುದನ್ನು ಕಡ್ಡಾಯಗೊಳಿಸಿರುವ ನಿರ್ಧಾರ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬುಧವಾರ ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪರಿಹಾರ ಪಡೆಯಲು ಸೇನಾ ಸಿಂಧು ಪೋರ್ಟಲ್ ನಲ್ಲಿ ನೋಂದಾವಣಿ ಮಾಡುವುದನ್ನು ಕಡ್ಡಾಯಗೊಳಿಸಿರುವ ನಿರ್ಧಾರ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬುಧವಾರ ಸೂಚನೆ ನೀಡಿದೆ. 

ವಿವಿಧ ವರ್ಗಗಳ ಕಾರ್ಮಿಕರಿಗೆ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದ್ದು, ಸೇವಾ ಸಿಂಧು ಪೋರ್ಟಲ್‌ನಲ್ಲಿ ನೊಂದಾಯಿಸಿಕೊಂಡವರಿಗೆ ರೂ.2 ಸಾವಿರ ಪರಿಹಾರ ಮೊತ್ತ ಪಾವತಿಸಲಾಗುತ್ತದೆ ಎಂದು ತಿಳಿಸಿದೆ. ಮನೆ ಕೆಲಸ ಮಾಡುವವರಿಗೆ ಡಿಜಿಟಲ್ ತಂತ್ರಜ್ಞಾನ ಬಳಕೆ ಜ್ಞಾನ ಇಲ್ಲದ ಕಾರಣ ಅವರು ಪೋರ್ಟಲ್‌ನಲ್ಲಿ ನೊಂದಾಯಿಸಿಕೊಳ್ಳಲು ಕಷ್ಟವಾಗಲಿದೆ ಎಂದು ಹೇಳಿ ಮನೆಗೆಲಸ ಕಾರ್ಮಿಕರ ಹಕ್ಕುಗಳ ಒಕ್ಕೂಟ ಹೈಕೋರ್ಟ್ ಮೊರೆ ಹೋಗಿದೆ. 

ಈ ಕುರಿತು ಒಕ್ಕೂಟ ಸಲ್ಲಿಸಿರುವ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಅರ್ಜಿದಾರರ ವಾದ ಸರಿಯಾಗಿದೆ. ಮನೆ ಕೆಲಸ ಮಾಡುವವರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸುವುದು ಕಷ್ಟವಾಗಲಿದೆ ಎಂದು ಅಭಿಪ್ರಾಯಪಟ್ಟಿತು.

ಅಲ್ಲದೆ, ಕೋವಿಡ್‌ ಲಾಕ್‌ಡೌನ್ ಸಂದರ್ಭದಲ್ಲಿ ಮನೆ ಕೆಲಸ ಮಾಡುವವರಿಗೂ ಒಂದು ಬಾರಿಯ ಪರಿಹಾರ ಯೋಜನೆಯ ಲಾಭ ದೊರಕುವಂತೆ ಸರ್ಕಾರ ನೋಡಿಕೊಳ್ಳಬೇಕು. ಎಲ್ಲಾ ಅರ್ಹರಿಗೂ ಈ ಪರಿಹಾರದ ಲಾಭ ತಲುಪಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಜೂ. 14ಕ್ಕೆ ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com