ಕೋವಿಡ್-19: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷಕ್ಕಿಂತ ಕಡಿಮೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ 2ನೇ ಅಲೆ ಇಳಿಮುಖವಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ. ಬೆಂಗಳೂರಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷಕ್ಕಿಂತ ಕೆಳಕ್ಕಿಳಿದಿದ್ದು 98,125ಕ್ಕೆ ಇಳಿದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ 2ನೇ ಅಲೆ ಇಳಿಮುಖವಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ. ಬೆಂಗಳೂರಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷಕ್ಕಿಂತ ಕೆಳಕ್ಕಿಳಿದಿದ್ದು 98,125ಕ್ಕೆ ಇಳಿದಿದೆ.

ನಗರದಲ್ಲಿ ನಿನ್ನೆ 2,395 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 11,89,541ಕ್ಕೆ ಏರಿಕೆಯಾಗಿದೆ. 

ಮೇ.15ರವರೆಗೆ ನಗರದಲ್ಲಿ ಅತೀ ಹೆಚ್ಚು 3,60,862 ಸಕ್ರಿಯ ಪ್ರಕರಣಗಳಿದ್ದವು. ಕೆಲವೇ ದಿನಗಳಲ್ಲಿ ಈ ಸಂಖ್ಯೆ 98,125ಕ್ಕೆ ಇಳಿಕೆಯಾಗಿರುವುದು ಉತ್ತಮ ಬೆಳವಣಿಗೆ ಎಂದು ಹೇಳಲಾಗುತ್ತಿದೆ. 

ಈ ನಡುವೆ ರಾಜ್ಯದಲ್ಲಿ ನಿನ್ನೆ ಒಟ್ಟಾರೆ 10,959 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,28,248ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟಾರೆ 2,15,525 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ.8.79ಕ್ಕೆ ತಲುಪಿದೆ. ರಾಜ್ಯದಲ್ಲಿ 17ರವರೆಗೂ 6,03,639 ಸಕ್ರಿಯ ಪ್ರಕರಣಗಳಿದ್ದವು.

ಈ ನಡುವೆ ರಾಜ್ಯದಲ್ಲಿ ನಿನ್ನೆ 192 ಸೋಂಕಿತರು ಕೋವಿಡ್‌-19ನಿಂದ ಅಸುನೀಗಿದ್ದಾರೆ. ಸಾವಿನ ಸಂಖ್ಯೆಯೂ ಕುಸಿತವಾಗಿರುವುದು ಆಶಾದಾಯಕ ಬೆಳವಣಿಯಾಗಿದೆ. ರಾಜ್ಯದ ಒಟ್ಟು ಸಾವಿನ ಸಂಖ್ಯೆ 32,291ಕ್ಕೆ ತಲುಪಿದೆ. ರಾಜ್ಯದಲ್ಲಿ ಸಾವಿನ ಪ್ರಮಾಣ ಶೇ.1.18ರಷ್ಟಿದೆ. ಬೆಂಗಳೂರು ನಗರದಲ್ಲಿ ಬುಧವಾರ 50 ಮಂದಿ ಸಾವನ್ನಪ್ಪಿದ್ದು, ಸಾವಿನ ಪ್ರಮಾಣ ಶೇ.1.27ಕ್ಕೆ ತಲುಪಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com