ರಾಜ್ಯದ ಹಲವೆಡೆ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಕೊರೋನಾ ಸಂದರ್ಭದಲ್ಲಿ ಆಡಳಿತ ವರ್ಗಕ್ಕೆ ಚುರುಕು ಮುಟ್ಟಿಸಿರುವ ರಾಜ್ಯ ಸರ್ಕಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ ಸಂದರ್ಭದಲ್ಲಿ ಆಡಳಿತ ವರ್ಗಕ್ಕೆ ಚುರುಕು ಮುಟ್ಟಿಸಿರುವ ರಾಜ್ಯ ಸರ್ಕಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ಬೆಂಗಳೂರು ಸಿಐಡಿ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. 

ಉಡುಪಿಯಲ್ಲಿ ಕರಾವಳಿ ಭದ್ರತಾ ಪೊಲೀಸ್ ಪಡೆಯ ಎಸ್‍ಪಿಯಾಗಿದ್ದ ಆರ್.ಚೇತನ್ ಅವರನ್ನು ಮೈಸೂರು ಎಸ್‍ಪಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದೆ.

ಕೋಲಾರ ಎಸ್‍ಪಿಯಾಗಿದ್ದ ಕಾರ್ತಿಕ್ ರೆಡ್ಡಿಯವರನ್ನು ಬೆಂಗಳೂರಿನ ವೈರ್‍ಲೆಸ್ ವಿಭಾಗಕ್ಕೆ, ಸಿಐಡಿ ಎಸ್‍ಪಿಯಾಗಿದ್ದ ರಾಹುಲ್ ಕುಮಾರ್ ಶಹಪೂರ್‍ವಾಡ್ ಅವರನ್ನು ತುಮಕೂರು ಎಸ್‍ಪಿಯಾಗಿ ವರ್ಗಾಯಿಸಲಾಗಿದೆ.

ದಾವಣಗೆರೆ ಎಸ್‍ಪಿಯಾಗಿದ್ದ ಹನುಮಂತರಾಯ ಅವರನ್ನು ಹಾವೇರಿ ಎಸ್‍ಪಿಯಾಗಿ, ಮೈಸೂರಿನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಪ್ರಕಾಶ್ ಗೌಡ ಅವರನ್ನು ಆಂತರಿಕ ಭದ್ರತಾ ಪಡೆ ಎಸ್‍ಪಿಯಾಗಿ ಹಾಗೂ ಹಾವೇರಿ ಎಸ್‍ಪಿಯಾಗಿದ್ದ ಕೆ.ಜಿ.ದೇವರಾಜು ಅವರನ್ನು ಸಿಐಡಿ ಎಸ್‍ಪಿಯಾಗಿ ಬೆಂಗಳೂರಿಗೆ ವರ್ಗಾಯಿಸಲಾಗಿದೆ.

ವರ್ಗಾವಣೆಗೊಂಡಿರುವ 12 ಐಪಿಎಸ್ ಅಧಿಕಾರಿಗಳ ವಿವರ ಇಂತಿದೆ...

  • ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ. ಡಿ. ಚನ್ನಣ್ಣನವರ್ ಅವರನ್ನು ಸಿಐಡಿ ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿದೆ.
  • ಉಡುಪಿ ಕರಾವಳಿ ಭದ್ರತಾ ಪೊಲೀಸ್ ಪಡೆಯ ಎಸ್‍ಪಿ ಆರ್. ಚೇತನ್ ಅವರನ್ನು ಮೈಸೂರು ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿದೆ.
  • ಮೈಸೂರು ಎಸ್‍ಪಿ ಸಿ. ಬಿ. ರಿಷ್ಯಂತ್ ಅವರನ್ನು ದಾವಣಗೆರೆ ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿದೆ.
  • ಕೋಲಾರ ಎಸ್‍. ಪಿ. ಕಾರ್ತಿಕ್ ರೆಡ್ಡಿ ಅವರನ್ನು ಬೆಂಗಳೂರಿನ ವೈರ್‌ಲೆಸ್ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.
  • ಸಿಐಡಿ ಎಸ್‍ಪಿಯಾಗಿದ್ದ ರಾಹುಲ್ ಕುಮಾರ್ ಶಹಪೂರ್‍ವಾಡ್ ಅವರನ್ನು ತುಮಕೂರು ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿದೆ.
  • ದಾವಣಗೆರೆ ಎಸ್‍ಪಿ ಹನುಮಂತರಾಯ ಅವರನ್ನು ಹಾವೇರಿ ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿದೆ
  • ಕಲಬುರಗಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ದೆಕ್ಕಾ ಕಿಶೋರ್ ಬಾಬು ಅವರನ್ನು ಕೋಲಾರ ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿದೆ.
  • ತುಮಕೂರು ಎಸ್‍ಪಿಯಾಗಿದ್ದ ಕೋನ ವಂಶಿ ಕೃಷ್ಣ ಅವರನ್ನು ಬೆಂಗಳೂರು ಗ್ರಾಮಾಂತರ ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿದೆ.
  • ಬೆಂಗಳೂರಿನ ಆಂತರಿಕ ಭದ್ರತಾ ಪಡೆಯ ಎಸ್‍ಪಿಯಾಗಿದ್ದ ಪ್ರದೀಪ್ ಗುಂಟಿ ಅವರನ್ನು ಮೈಸೂರಿನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
  • ಬೆಂಗಳೂರಿನ ವೈರ್‌ಲೆಸ್ ವಿಭಾಗದ ಎಸ್‍ಪಿಯಾಗಿದ್ದ ಅದ್ದೂರು ಶ್ರೀನಿವಾಸುಲು ಅವರನ್ನು ಕಲಬುರಗಿಯ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
  • ಮೈಸೂರಿನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಪ್ರಕಾಶ್ ಗೌಡ ಅವರನ್ನು ಆಂತರಿಕ ಭದ್ರತಾ ಪಡೆ ಎಸ್‍ಪಿಯಾಗಿ ವರ್ಗಾವಣೆ ಮಾಡಲಾಗಿದೆ.
  • ಹಾವೇರಿ ಎಸ್‍ಪಿ ಕೆ. ಜಿ. ದೇವರಾಜು ಅವರನ್ನು ಸಿಐಡಿ ಎಸ್‍ಪಿಯಾಗಿ ಬೆಂಗಳೂರಿಗೆ ವರ್ಗಾವಣೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com