ಜೂನ್ 10, 11 ರಂದು ರಾಜ್ಯದ ಕ್ರೀಡಾಪಟುಗಳಿಗೆ ಕೊರೋನಾ ಲಸಿಕೆ

ಕ್ರೀಡಾಪಟುಗಳಿಗೆ ಉಚಿತವಾಗಿ ಕೋವಿಡ್–19ನ ಮೊದಲ ಹಂತದ ಲಸಿಕೆ ನೀಡುವ ಅಭಿಯಾನವನ್ನು ರಾಜ್ಯ ಸರ್ಕಾರ ನಗರದ ಶ್ರೀ ಕಂಠೀರವ ಸ್ಟೇಡಿಯಂ ನಲ್ಲಿ ಜೂನ್ 10 ಮತ್ತು 11 ರಂದು ಹಮ್ಮಿಕೊಂಡಿದೆ. 

Published: 10th June 2021 11:54 AM  |   Last Updated: 10th June 2021 01:07 PM   |  A+A-


file photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ಕ್ರೀಡಾಪಟುಗಳಿಗೆ ಉಚಿತವಾಗಿ ಕೋವಿಡ್–19ನ ಮೊದಲ ಹಂತದ ಲಸಿಕೆ ನೀಡುವ ಅಭಿಯಾನವನ್ನು ರಾಜ್ಯ ಸರ್ಕಾರ ನಗರದ ಶ್ರೀ ಕಂಠೀರವ ಸ್ಟೇಡಿಯಂ ನಲ್ಲಿ ಜೂನ್ 10 ಮತ್ತು 11 ರಂದು ಹಮ್ಮಿಕೊಂಡಿದೆ. 

ಈ ಕುರಿತು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಮಾಹಿತಿ ನೀಡಿದ್ದು, ಅಭಿಯಾನದಲ್ಲಿ ಒಟ್ಟು 10,000 ಕ್ರೀಡಾಪಟುಗಳಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದ್ದಾರೆ. 

ಜೂನ್ 10 ಹಾಗೂ 11ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರ, ಪಟ್ಟಣ ಹಾಗೂ ತಾಲೂಕು ಕೇಂದ್ರಗಳಲ್ಲಿರುವ ಕ್ರೀಡಾಂಗಣಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದೆ. ಅಂತಾರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳು, ಕೋಚ್‌, ಅಧಿಕಾರಿ ಹಾಗೂ ಸಿಬ್ಬಂದಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. 

ಜೂನ್ 10ರ ಗುರುವಾರ ಬೆಳಗ್ಗೆ 11.30ಕ್ಕೆ ಸರಿಯಾಗಿ ನಗರದ ಹೃದಯ ಭಾಗದಲ್ಲಿರುವ ಕಂಠೀರವ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಗುವುದು. ಕ್ರೀಡಾಪಟುಗಳು, ತಾಂತ್ರಿಕ ವರ್ಗ, ಅಧಿಕಾರಿ ವರ್ಗದವರು ಲಸಿಕೆಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. 


Stay up to date on all the latest ರಾಜ್ಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp