ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಮುಂದೂಡಿಕೆ

ಮೈಸೂರು ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ನಡೆಯಬೇಕಿದ್ದ ಮೇಯರ್‌ ಚುನಾವಣೆಯನ್ನು ನ್ಯಾಯಾಲಯದ ತಡೆಯಾಜ್ಞೆಯಂತೆ ಮುಂದೂಡಲಾಗಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ನಡೆಯಬೇಕಿದ್ದ ಮೇಯರ್‌ ಚುನಾವಣೆಯನ್ನು ನ್ಯಾಯಾಲಯದ ತಡೆಯಾಜ್ಞೆಯಂತೆ ಮುಂದೂಡಲಾಗಿದೆ.

ಪಾಲಿಕೆಯ ಕಾಂಗ್ರೆಸ್‌ ಸದಸ್ಯ ಪ್ರದೀಪ್‌ ಚಂದ್ರ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬಾರದಿರುವ ಹಾಗೂ ಲಾಕ್‌ಡೌನ್‌ ಇರುವಾಗ ಚುನಾವಣೆ ನಡೆಸುವುದಕ್ಕೆ ತಕರಾರು ಎತ್ತಿದ್ದರು. ಜೂನ್ 21ರವರೆಗೆ ಯಾವುದೇ ಚುನಾವಣೆ ನಡೆಸದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಚುನಾವಣೆಗೆ ಅವಕಾಶ ನೀಡಬಾರದು ಎಂದು ಕೋರಿದ್ದರು. ಇವರ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿರುವ ಹೈಕೋರ್ಟ್‌ ಚುನಾವಣೆಗೆ ತಡೆಯಾಜ್ಞೆ ನೀಡಿದೆ.

ಮೈಸೂರು ಪ್ರಾದೇಶಿಕ ಆಯುಕ್ತರ ಸೂಚನೆಯಂತೆ ತಡೆಯಾಜ್ಞೆ ಇರುವ ಕಾರಣ ಚುನಾವಣೆಯನ್ನು ಮುಂದೂಡಿರುವುದಾಗಿ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ ಹೇಳಿಕೆ ನೀಡಿದ್ದಾರೆ. ಜೂ. 11ರಂದು ಮೇಯರ್‌ ಆಯ್ಕೆಗೆ ಚುನಾವಣೆ ನಿಗದಿಯಾಗಿತ್ತು.  ನ್ಯಾಯಾಲಯದ ತಡೆಯಾಜ್ಞೆ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com