ಗ್ರೇಡ್ ಸುಧಾರಿಸಿಕೊಳ್ಳಲು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ: ಶಿಕ್ಷಣ ಇಲಾಖೆ

ಈ ವರ್ಷ ದ್ವಿತೀಯ ಪಿಯುಸಿಗೆ ತೇರ್ಗಡೆ ಹೊಂದುತ್ತಿರುವ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ತಮ್ಮ ಗ್ರೇಡ್ ಗಳನ್ನು ಸುಧಾರಿಸಿಕೊಳ್ಳಲು ಮೌಲ್ಯಮಾಪನವನ್ನು ಆಯ್ಕೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಅವಕಾಶ ಕೊಟ್ಟಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಈ ವರ್ಷ ದ್ವಿತೀಯ ಪಿಯುಸಿಗೆ ತೇರ್ಗಡೆ ಹೊಂದುತ್ತಿರುವ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ತಮ್ಮ ಗ್ರೇಡ್ ಗಳನ್ನು ಸುಧಾರಿಸಿಕೊಳ್ಳಲು ಮೌಲ್ಯಮಾಪನವನ್ನು ಆಯ್ಕೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಅವಕಾಶ ಕೊಟ್ಟಿದೆ.

ಈ ವರ್ಷ ಕೊರೋನಾ ಕಾರಣದಿಂದ ಪ್ರಥಮ ಪಿಯುಸಿ ಪರೀಕ್ಷೆ ರದ್ದು ಮಾಡಿರುವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಅವರ ಕನಿಷ್ಠ ಅಂಕಗಳ ಜೊತೆಗೆ ತೆರೆದ ಪುಸ್ತಕ ಪರೀಕ್ಷಾ ವ್ಯವಸ್ಥೆಯಡಿ ಅಂಕಗಳನ್ನು ನೀಡುತ್ತದೆ. ಇಲಾಖೆ ಈಗಾಗಲೇ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಿದೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲಿ ಮಾದರಿ ಪ್ರಶ್ನೆಪತ್ರಿಕೆಯ ಕೊಂಡಿಯನ್ನು ನೀಡಲಾಗಿದೆ. ಶೈಕ್ಷಣಿಕ ವರ್ಷದ ಕೋರ್ಸ್ ವರ್ಕ್ ನಿಂದಲೇ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಇಲಾಖೆಯ ನಿರ್ದೇಶಕ ಸ್ನೇಹಲ್ ಆರ್ ಹೇಳುತ್ತಾರೆ.

ವಿದ್ಯಾರ್ಥಿಗಳು ಎರಡು ಪ್ರಶ್ನೆಪತ್ರಿಕೆಗಳನ್ನು ಬರೆಯಬೇಕು. ಒಂದು ಜೂನ್ 10ರಿಂದ 20ರೊಳಗೆ 10 ದಿನಗಳ ಕಾಲಾವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ನಂತರ 5 ದಿನಗಳ ಅಂತರದ ನಂತರ ಜೂನ್ 26ರ ಹೊತ್ತಿಗೆ ಎರಡನೇ ಪ್ರಶ್ನೆಪತ್ರಿಕೆಯ ಸೆಟ್ ಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com