ಸಂಸ್ಕೃತ ವಿವಿ ಅಭಿವೃದ್ಧಿಗೆ ಮನವಿ: ಡಿಸಿಎಂ ಅಶ್ವತ್ಥ ನಾರಾಯಣ್ ಭೇಟಿಯಾದ ಮಠಾಧೀಶರು

ಅಖಿಲ ಭಾರತ ಸನಾತನ ಮಠಾಧಿಪತಿಗಳ ಒಕ್ಕೂಟದ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಜಿಲ್ಲೆಗಳ ಸುಮಾರು 30ಕ್ಕೂ ಹೆಚ್ಚು ಮಠಾಧೀಶಕರು ಉನ್ನತ ಶಿಕ್ಷಣ ಖಾತೆ ಹೊಣೆ ಹೊತ್ತಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರನ್ನು ಶುಕ್ರವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. 
ಡಿಸಿಎಂ ಅಶ್ವತ್ಥ ನಾರಾಯಣ್
ಡಿಸಿಎಂ ಅಶ್ವತ್ಥ ನಾರಾಯಣ್

ಬೆಂಗಳೂರು: ಮಾಗಡಿ ತಾಲೂಕಿನಲ್ಲಿರುವ ಸಂಸ್ಕೃತ ವಿಶ್ವವಿದ್ಯಾಲಯವನ್ನು ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಮಾಡುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಅಖಿಲ ಭಾರತ ಸನಾತನ ಮಠಾಧಿಪತಿಗಳ ಒಕ್ಕೂಟದ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಜಿಲ್ಲೆಗಳ ಸುಮಾರು 30ಕ್ಕೂ ಹೆಚ್ಚು ಮಠಾಧೀಶಕರು ಉನ್ನತ ಶಿಕ್ಷಣ ಖಾತೆ ಹೊಣೆ ಹೊತ್ತಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರನ್ನು ಶುಕ್ರವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. 

ಡಾಲರ್ಸ್ ಕಾಲೋನಿಯಲ್ಲಿರುವ ಅಶ್ವತ್ಥ ನಾರಾಯಣ ಅವರ ನಿವಾಸಕ್ಕೆ ಆಗಮಿಸಿದ ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವಿವಿಧ ಮಠಾಧೀಶರು, ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಕನ್ನಡಿಗರನ್ನೇ ನೇಮಕ ಮಾಡಬೇಕು ಎಂಬ ಸಲಹೆ ನೀಡಿದರು.

ಜೊತೆಗೆ ಸಂಸ್ಕೃತ ಪ್ರಕರಣಗೆಗೆ ಸೂಕ್ತ ಪ್ರೋತ್ಸಾಹ ನೀಡುವಂತೆಯೂ ಮನವಿ ಮಾಡಿದರು ಎಂದು ವರದಿಗಳಿಂದ ತಿಳಿದುಬಂದಿದೆ. 

ಸ್ವಾಮೀಜಿಗಳು ನೀಡಿದ ಮನವಿ ಪತ್ರ ಸ್ವೀಕರಿಸಿದ ಅಶ್ವತ್ಥ ನಾರಾಯಣ ಅವರು ಅಥಿ ಶೀಘ್ರದಲ್ಲೇ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಕೆಲಸಗಳನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com