ಶುಲ್ಕ ಕಟ್ಟಿಸಿಕೊಳ್ಳಲು ಖಾಸಗಿ ಶಾಲೆಗಳ ಲೇವಾದೇವಿ ವ್ಯವಹಾರ: ನೋಟಿಸ್ ಎಚ್ಚರಿಕೆ ನೀಡಿದ ಶಿಕ್ಷಣ ಇಲಾಖೆ

ಕೆಲವು ಖಾಸಗಿ ಶಾಲೆಗಳು ಶಾಲಾ ಶುಲ್ಕ ಕಟ್ಟಲು ಪೋಷಕರಿಗೆ ಫೈನಾನ್ಸ್ ಕಂಪನಿಯವರಿಗೆ ಸಾಲ ಕೊಡಿಸುತ್ತಿರುವ ಬೆಳವಣಿಗೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಅಂತಹ ಶಾಲೆಗಳಿಗೆ ನೋಟಿಸ್ ಜಾರಿ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ. 
ಸುರೇಶ್ ಕುಮಾರ್
ಸುರೇಶ್ ಕುಮಾರ್

ಬೆಂಗಳೂರು: ಕೆಲವು ಖಾಸಗಿ ಶಾಲೆಗಳು ಶಾಲಾ ಶುಲ್ಕ ಕಟ್ಟಲು ಪೋಷಕರಿಗೆ ಫೈನಾನ್ಸ್ ಕಂಪನಿಯವರಿಗೆ ಸಾಲ ಕೊಡಿಸುತ್ತಿರುವ ಬೆಳವಣಿಗೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಅಂತಹ ಶಾಲೆಗಳಿಗೆ ನೋಟಿಸ್ ಜಾರಿ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಶಾಲೆಗಳು ಲೇವಾದೇವಿದಾರರ ಜೊತೆ ಸೇರಿ ವಸೂಲಿಗೆ ಇಳಿದಿದ್ದು, ಈ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಇದು ತಾತ್ವಿಕವಾಗಿ ಯಾರೂ ಒಪ್ಪಿಕೊಳ್ಳದ ವಿಚಾರ. ಈ ರೀತಿಯ ಬೆಳವಣಿಗೆ ಎಲ್ಲಿಯೂ ನೋಡಿರಲಿಲ್ಲ. ಆದರೆ, ನಡೆದಿದೆ. ಇದು ಆಗಬಾರದಿತ್ತು ಎಂದು ಹೇಳಿದ್ದಾರೆ. 

ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆಯವರು ಪೋಷಕರು ಹಾಗೂ ಲೇವಾದೇವಿದಾರರನ್ನು ಶಾಲೆಗೆ ಕರೆಸಿಕೊಂಡು ಸಾಲ ಕೊಡಿಸುತ್ತಿರುವುದು ಗೊತ್ತಾಗಿ ಮುಖ್ಯಮಂತ್ರಿಗಳೂ ಕೂಡ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇಂತಹ ಬೆಳವಣಿಗೆಗಳಿಗೆ ನಾವು ಅವಕಾಶ ಕೊಡುವುದಿಲ್ಲ. ಸಂಬಂಧಪಟ್ಟ ಶಾಲೆಗಳಿಗೆ ಶೀಘ್ರದಲ್ಲೇ ನೋಟಿಸ್ ಜಾರಿ ಮಾಡುತ್ತೇವೆಂದು ತಿಳಿಸಿದ್ದಾರೆ. 

ಪೋಷಕರ ಆರ್ಥಿಕ ಪರಿಸ್ಥಿತಿ ಹಾಗೂ ಖಾಸಗಿ ಶಾಲಾ ಶಿಕ್ಷಕರಿಗೆ ವೇತನ ಪಾವತಿಯಾಗದ ಸಂಗತಿ ತಿಳಿದಿದೆ. ಈ ಎರಡೂ ವಿಚಾರದಲ್ಲಿ ಸಮತೋಲನ ಕಾಯ್ದುಕೊಳ್ಳಬೇಕಿದೆ. ಹಿಂದಿನ ವರ್ಷ ಸರ್ಕಾರ ಜಾರಿ ಮಾಡಿದ ಶೇ.70ರ ಶುಲ್ಕ ಪಾವತಿ ಆದೇಶ ಒಪ್ಪದ ಕೆಲ ಸಂಘಟನೆಯವರು ಮತ್ತು ಖಾಸಗಿ ಶಾಲೆಯವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಈ ವರ್ಷವೂ ಇದೆ ಪರಿಸ್ಥಿತಿ ಇದೆ. ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರೇ ಇದನ್ನು ಬಗೆಹರಿಸಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com