ಎಚ್. ಡಿ. ಕುಮಾರಸ್ವಾಮಿ
ಎಚ್. ಡಿ. ಕುಮಾರಸ್ವಾಮಿ

ಕಾಂಗ್ರೆಸ್ ಹೋರಾಟ ತೆರಿಗೆ ಇಳಿಸಲೋ ಅಥವಾ ಪೆಟ್ರೋಲ್ ಅನ್ನು ಜಿಎಸ್ಟಿಗೆ ಸೇರಿಸಲೋ: ಜೆಡಿಎಸ್ ಪ್ರಶ್ನೆ

ಕಾಂಗ್ರೆಸ್‌ ಹೋರಾಡುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲ್‌ ಅನ್ನು ಜಿಎಸ್ ಟಿಗೆ ಸೇರಿಸಲೋ? ಎಂದು ಜೆಡಿಎಸ್ ಪ್ರಶ್ನಿಸಿದೆ.

ಬೆಂಗಳೂರು: ಕಾಂಗ್ರೆಸ್‌ ಹೋರಾಡುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲ್‌ ಅನ್ನು ಜಿಎಸ್ ಟಿಗೆ ಸೇರಿಸಲೋ? ಎಂದು ಜೆಡಿಎಸ್ ಪ್ರಶ್ನಿಸಿದೆ.

ಈ ಕುರಿತು ಇಂದು ಟ್ವೀಟ್ ಮಾಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ, ಪೆಟ್ರೋಲ್‌ ಬೆಲೆ ಏರಿಕೆ ವಿರುದ್ಧದ ಹೋರಾಟಗಳು ತೆರಿಗೆ, ಸುಂಕ ಇಳಿಕೆಯ ಉದ್ದೇಶದ್ದಾಗಿರಬೇಕೇ ವಿನಾ ಜಿಎಸ್ ಟಿ ಗೆ ಸೇರಿಸುವುದಾಗಿರಬಾರದು. ಈಗ ಕಾಂಗ್ರೆಸ್‌ ಪ್ರತಿಭಟಿಸುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲನ್ನು ಜಿಎಸ್ ಟಿಗೆ ಸೇರಿಸಲೋ ಎಂಬುದು ಸ್ಪಷ್ಟವಾಗಬೇಕು. ಜಿಎಸ್ ಟಿಗೆ ಸೇರಿಸುವುದೇ ಕಾಂಗ್ರೆಸ್‌ ಉದ್ದೇಶವಾಗಿದ್ದರೆ ಅದು ಶೋಷಣೆ ಪರವಾದ ಹೋರಾಟ ಎಂದಿದ್ದಾರೆ.

ಕೇಂದ್ರ ಸರ್ಕಾರ ಪೆಟ್ರೋಲ್‌ ಬೆಲೆ ಏರಿಸುತ್ತಿದೆ. ಇತ್ತ ಕಾಂಗ್ರೆಸ್‌ ದೇಶದಾದ್ಯಂತ ಹೋರಾಡುತ್ತಿದೆ. ಪೆಟ್ರೋಲ್‌ ಬೆಲೆ ಇಳಿಯಬೇಕಿದ್ದರೆ ಅದನ್ನು ಜಿಎಸ್ ಟಿಗೆ ಸೇರಿಸಬೇಕೆಂದು ಕೇಂದ್ರ ಹೇಳಿದರೆ, ಕಾಂಗ್ರೆಸ್‌ ಕೂಡ ಅದನ್ನೇ ಪ್ರತಿಪಾದಿಸಿದೆ., ಹಾಗಾದರೆ, ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್ ಟಿಗೆ ಸೇರಿಸಲೋ? ಎಂದು ಪ್ರಶ್ನಿಸಿದ್ದಾರೆ.

ಪೆಟ್ರೋಲ್‌ ಮೇಲೆ ಕೇಂದ್ರ, ರಾಜ್ಯ ಸರ್ಕಾರಗಳೆರಡು ವಿಧಿಸುತ್ತಿರುವ ಅತ್ಯಧಿಕ ತೆರಿಗೆ ಇಳಿಸುವ ಮೂಲಕ ಬೆಲೆ ಏರಿಕೆ ತಗ್ಗಿಸಬೇಕು ಎಂಬುದು ಜೆಡಿಎಸ್ ಒತ್ತಾಯ. ಜತೆಗೆ ಪೆಟ್ರೋಲನ್ನು ಜಿಎಸ್ ಟಿ ಗೆ ಸೇರಿಸುವ ರಾಷ್ಟ್ರೀಯ ಪಕ್ಷಗಳ ಹುನ್ನಾರದ ವಿರುದ್ಧ ಹೋರಾಡುವುದೂ ನಮ್ಮ ನಿಲುವು.  ಇದರ ಸುತ್ತಲೇ ನಾವು ಹೋರಾಟ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com