ಸೋಂಕು, ಪಾಸಿಟಿವಿಟಿ ಪ್ರಮಾಣ ಏರಿಕೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಜನರ ಮೇಲಿದೆ: ಬಿಬಿಎಂಪಿ
ಅನ್'ಲಾಕ್ ಪ್ರಕ್ರಿಯೆ ಆರಂಭವಾಗುತ್ತಿದ್ದು, ನಗರದಲ್ಲಿ ಸೋಂಕು ಹಾಗೂ ಪಾಸಿಟಿವಿಟಿ ಪ್ರಮಾಣ ಏರಿಕೆಯಾಗದಂತೆ ಮಾಡುವ ಜವಾಬ್ದಾರಿ ಜನರ ಮೇಲೆಯೇ ಇದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಶನಿವಾರ ಹೇಳಿದ್ದಾರೆ.
Published: 13th June 2021 08:46 AM | Last Updated: 13th June 2021 09:05 AM | A+A A-

ಗೌರವ್ ಗುಪ್ತಾ
ಬೆಂಗಳೂರು: ಅನ್'ಲಾಕ್ ಪ್ರಕ್ರಿಯೆ ಆರಂಭವಾಗುತ್ತಿದ್ದು, ನಗರದಲ್ಲಿ ಸೋಂಕು ಹಾಗೂ ಪಾಸಿಟಿವಿಟಿ ಪ್ರಮಾಣ ಏರಿಕೆಯಾಗದಂತೆ ಮಾಡುವ ಜವಾಬ್ದಾರಿ ಜನರ ಮೇಲೆಯೇ ಇದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಶನಿವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸೋಂಕು ಹೆಚ್ಚಾಗದಂತೆ ನೋಡಿಕೊಳ್ಳುವ ಸಲುವಾಗಿ ಪರೀಕ್ಷೆಗಳನ್ನು ಪರಿಣಾಮಕಾರಿ ರೀತಿಯಲ್ಲಿ ನಡೆಸಲಾಗುತ್ತದೆ. ಬಸ್ ನಿಲ್ದಾಣ ಹಾಗೂ ರೈಲ್ವೇ ನಿಲ್ದಾಣಗಳಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಇದಲ್ಲದೆ, ಸೋಂಕಿತರೊಂದಿಗೆ ಸಂಪರ್ಕದಲ್ಲಿರುವವರನ್ನೂ ಪತ್ತೆ ಹಚ್ಚುವ ಕಾರ್ಯ ಆರಂಭವಾಗುತ್ತದೆ. ಲಕ್ಷಣಗಳು ಕಂಡು ಬಂದ ಕೂಡಲೇ ಇತರರಿಗೆ ಸೋಂಕು ಹರಡದಂತೆ ನೋಡಿಕೊಳ್ಳಲು ಜನರು ತಾವಾಗಿಯೇ ಪರೀಕ್ಷೆಗೊಳಪಡಬೇಕು. ಇದರ ಜೊತೆಗೆ ಕೋವಿಡ್ ಮಾರ್ಗಸೂಚಿಗಳನ್ನೂ ಅನುಸರಿಸಿ, ಫಲಾನುಭವಿಗಳು ಲಸಿಕೆ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ.
ಕೇವಲ ಒಂದೇ ದಿನದಲ್ಲಿ 1 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. 30 ದಿನಗಳಲ್ಲಿ 30 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಿದ್ದೇವೆ. ಜನರ ಅಗತ್ಯಗಳಿಗೆ ಅನುಸಾರ ಲಸಿಕೆ ನೀಡಲಾಗುತ್ತದೆ. ಈಗಾಗಲೇ ನಗರದಲ್ಲಿ ಎರಡೇ ಡೋಸ್ ಲಸಿಕೆ ಸೇರಿದಂತೆ 45 ವರ್ಷ ಮೇಲ್ಪಟ್ಟ ಶೇ.50 ರಷ್ಟು ಜನರಿಗೆ ಲಸಿಕೆ ಲಸಿಕೆ ನೀಡಲಾಗಿದೆ. 360 ಡಿಗ್ರಿಯಲ್ಲಿ ಎಷ್ಟು ಜನರಿಗೆ ಸಾಧ್ಯವೋ ಅಷ್ಟು ಜನರಿಗೆ ಲಸಿಕೆ ನೀಡಲಾಗುತ್ತಿದೆ ಎಂದಿದ್ದಾರೆ.
ಪಟ್ಟಿಯಲ್ಲಿರುವ 15 ವಿವಿಧ ಗುಂಪಿನ 2 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ಲಸಿಕೆ ಅಭಿಯಾನವನ್ನು ಮತ್ತಷ್ಟು ಏರುಗತಿ ಮಾಡಲು 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕುರಿತು ಸರ್ಕಾರ ಮಾರ್ಗಸೂಚಿಗಾಗಿ ಕಾಯಲಾಗುತ್ತಿದೆ. ಕೆಲ ಕಚೇರಿಗಳು ಶೀಘ್ರಗತಿಯಲ್ಲಿ ಲಸಿಕೆ ನೀಡುವಂತೆ ಬೇಡಿಕೆಯಿಟ್ಟಿದ್ದಾರೆಂದು ಹೇಳಿದ್ದಾರೆ.