ಬಾಂಗ್ಲಾ- ಪಾಕ್ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ ರಾಜ್ಯದಿಂದ ಹೊರಗೆ ಕಳುಹಿಸುತ್ತೇವೆ: ಯಡಿಯೂರಪ್ಪ

ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ ರಾಜ್ಯದಿಂದ ಹೊರಗೆ ಕಳುಹಿಸುತ್ತೇವೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಶಿವಮೊಗ್ಗ:  ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ ರಾಜ್ಯದಿಂದ ಹೊರಗೆ ಕಳುಹಿಸುತ್ತೇವೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಶಿಕಾರಿಪುರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ರಮವಾಗಿ ಇರುವ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ನಿವಾಸಿಗಳ ಪತ್ತೆಗಾಗಿ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು. ಅಧಿಕಾರಿಗಳು ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಪ್ರಸ್ತುತ ಲಾಕ್ ಡೌನ್ ಮುಂದುವರೆಸಿರುವ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾದರೆ ಲಾಕ್ ಡೌನ್ ತೆರವುಗೊಳಿಸುವುದಾಗಿ ಯಡಿಯೂರಪ್ಪ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com