ಸಂಚಾರಿ ವಿಜಯ್ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವೆ: ಡಿಸಿಎಂ ಅಶ್ವಥ ನಾರಾಯಣ
ಬೈಕ್ ಅಪಘಾತದಲ್ಲಿ ಮೆದುಳಿಗೆ ತೀವ್ರ ಸ್ವರೂಪದ ಗಾಯಗಳಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ತಾವು ಭರಿಸುವುದಾಗಿ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ.
Published: 14th June 2021 12:23 PM | Last Updated: 14th June 2021 02:56 PM | A+A A-

ಸಂಚಾರಿ ವಿಜಯ್, ಡಿಸಿಎಂ ಅಶ್ವಥ್ ನಾರಾಯಣ
ಬೆಂಗಳೂರು: ಬೈಕ್ ಅಪಘಾತದಲ್ಲಿ ಮೆದುಳಿಗೆ ತೀವ್ರ ಸ್ವರೂಪದ ಗಾಯಗಳಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ತಾವು ಭರಿಸುವುದಾಗಿ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ.
ಸದ್ಯ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ನ್ಯೂರೋ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರಿಯುತ್ತಿದ್ದು, ಉಸಿರಾಟವನ್ನೂ ನಿಲ್ಲಿಸಿದ್ದಾರೆ, ಮೆದುಳು ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ, ಸಂಪೂರ್ಣವಾಗಿ ಜೀವ ರಕ್ಷಕದ ನೆರವಿನಲ್ಲಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಈ ಮಧ್ಯೆ ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ತಮ್ಮ ಫೌಂಡೇಶನ್ ಮೂಲಕವೇ ಭರಿಸಲಾಗುವುದು, ಅವರ ಕುಟುಂಬಸ್ಥರು, ಸಂಬಂಧಿಕರು, ಸ್ನೇಹಿತರಿಂದ ಯಾರಿಂದರೂ ಹಣ ಪಡೆದುಕೊಳ್ಳುವುದು ಬೇಡ ಎಂದು ಉಪ ಮುಖ್ಯಮಂತ್ರಿ ಅಶ್ವಥ ನಾರಾಯಣ ಆಸ್ಪತ್ರೆಯ ಆಡಳಿತ ವರ್ಗಕ್ಕೆ ಕೇಳಿಕೊಂಡಿದ್ದಾರೆ.
ಇಂದು ಬೆಳಗ್ಗೆ ಅಪೊಲೋ ಆಸ್ಪತ್ರೆಗೆ ಭೇಟಿ ನೀಡಿದ ಅಶ್ವಥ ನಾರಾಯಣ ನಟನ ದೇಹ ಸ್ಥಿತಿ, ಚಿಕಿತ್ಸೆ ಬಗ್ಗೆ ವಿವರ ಪಡೆದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿ, ವಿಜಯ್ ಅವರ ಚಿಕಿತ್ಸಾ ವೆಚ್ಚವನ್ನು ನಮ್ಮ ಫೌಂಡೇಶನ್ ಮೂಲಕವೇ ಭರಿಸುತ್ತೇವೆ, ಅವರು ಚೇತರಿಕೆ ಕಂಡು ಮೊದಲಿನಂತಾಗಲಿ ಎಂದು ಆಶಿಸುತ್ತೇನೆ ಎಂದರು.
ಉಪ ಮುಖ್ಯಮಂತ್ರಿಗಳ ಸಹಾಯಕ್ಕೆ ಸಂಚಾರಿ ವಿಜಯ್ ಕುಟುಂಬಸ್ಥರು ಧನ್ಯವಾದ ಹೇಳಿದ್ದಾರೆ.