ಸುತ್ತೂರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿ ಪೂರ್ವಾಶ್ರಮದ ಮಾತೃಶ್ರೀ ಶಿವನಾಗಮ್ಮ ಲಿಂಗೈಕ್ಯ: ಸಿಎಂ ಸಂತಾಪ
ಮೈಸೂರಿನ ಸುತ್ತೂರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳ ಪೂರ್ವಾಶ್ರಮದ ಮಾತೃಶೀ ಶಿವನಾಗಮ್ಮ ಅವರು ಲಿಂಗೈಕ್ಯರಾಗಿದ್ದಾರೆ.
Published: 14th June 2021 11:06 AM | Last Updated: 14th June 2021 02:52 PM | A+A A-

ಶಿವನಾಗಮ್ಮ
ಬೆಂಗಳೂರು: ಮೈಸೂರಿನ ಸುತ್ತೂರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳ ಪೂರ್ವಾಶ್ರಮದ ಮಾತೃಶೀ ಶಿವನಾಗಮ್ಮ ಅವರು ಲಿಂಗೈಕ್ಯರಾಗಿದ್ದಾರೆ.
ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳವರು, ಪೂರ್ವಾಶ್ರಮದ ಮಾತೃಶೀ ಶಿವನಾಗಮ್ಮ ಪ್ರೇರೇಪಣೆ ಪಡೆದು ಧಾರ್ಮಿಕ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಕಾರಣೀಭೂತರಾಗಿದ್ದರು.
ಸುತ್ತೂರು ಶ್ರೀಗಳು ಶಿಕ್ಷಣ, ಅನ್ನದಾಸೋಹ , ಆರೋಗ್ಯ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಾಡಿರುವ ಸಾಧನೆಗೆ ಶಿವವನಾಗಮ್ಮ ಅವರ ಮಾರ್ಗದರ್ಶನ ಕಾರಣವಾಗಿತ್ತು
ಸಿಎಂ ಸಂತಾಪ
ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಪೂರ್ವಾಶ್ರಮದ ಮಾತೃಶೀ ಶ್ರೀಮತಿ ಶಿವನಾಗಮ್ಮನವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರ ಆತ್ಮಕ್ಕೆ ಸದ್ಗತಿಯನ್ನು ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ.
ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಪೂರ್ವಾಶ್ರಮದ ಮಾತೃಶೀ ಶ್ರೀಮತಿ ಶಿವನಾಗಮ್ಮನವರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
— CM of Karnataka (@CMofKarnataka) June 14, 2021
ಮೃತರ ಆತ್ಮಕ್ಕೆ ಸದ್ಗತಿಯನ್ನು ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ.