ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸಲ್ ದರಗಳು ಇಂತಿವೆ!

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 28 ರಿಂದ 30 ಪೈಸೆ ಮತ್ತು ಡೀಸೆಲ್ ದರ 28 ರಿಂದ 31 ಪೈಸೆ ಏರಿಕೆಯಾಗಿದೆ. ಅಂತೆಯೇ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಶತಕದತ್ತ ದಾಪುಗಾಲಿರಿಸಿದೆ.
ಪೆಟ್ರೋಲ್ ದರ
ಪೆಟ್ರೋಲ್ ದರ

ನವದೆಹಲಿ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 28 ರಿಂದ 30 ಪೈಸೆ ಮತ್ತು ಡೀಸೆಲ್ ದರ 28 ರಿಂದ 31 ಪೈಸೆ ಏರಿಕೆಯಾಗಿದೆ. ಅಂತೆಯೇ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಶತಕದತ್ತ ದಾಪುಗಾಲಿರಿಸಿದೆ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಸೋಮವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ. 

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 28 ರಿಂದ 30 ಪೈಸೆ ಮತ್ತು ಡೀಸೆಲ್ ದರ 28 ರಿಂದ 31 ಪೈಸೆ ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.69ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 92.58ರೂ  ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 96.47ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 87.33ರೂ ಗೆ ಏರಿಕೆಯಾಗಿದೆ.

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 102.64ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 94.76ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 96.4ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 90.18ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತೀ  ಲೀಟರ್ ಪೆಟ್ರೋಲ್ ದರ 97.74ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 91.97ರೂ ಗೆ ಏರಿಕೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com