ಜೂ.17ರವರೆಗೆ ರಾಜ್ಯಾದ್ಯಂತ ಮಳೆ: ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯಾದ್ಯಂತ ಜೂನ್ 17ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಧಿಕ ಮಳೆ ಸುರಿಯುವಾದ ಹವಾಮಾನ ಇಲಾಖೆ ಘೋಷಣೆ ಮಾಡುವ ಆರೆಂಜ್ ಅಲರ್ಟ್ ನ್ನು ಕರಾವಳಿ ಜಿಲ್ಲೆಗಳಲ್ಲಿ ಜೂನ್ 17ರವರೆಗೆ ಘೋಷಣೆ ಮಾಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯಾದ್ಯಂತ ಜೂನ್ 17ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಧಿಕ ಮಳೆ ಸುರಿಯುವಾದ ಹವಾಮಾನ ಇಲಾಖೆ ಘೋಷಣೆ ಮಾಡುವ ಆರೆಂಜ್ ಅಲರ್ಟ್ ನ್ನು ಕರಾವಳಿ ಜಿಲ್ಲೆಗಳಲ್ಲಿ ಜೂನ್ 17ರವರೆಗೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಭಾಗಗಳು ಸೇರಿದಂತೆ ರಾಜ್ಯಾದ್ಯಂತ ಜೂನ್ 17ರವರೆಗೆ ತೀವ್ರ ಮಳೆಯಾಗಲಿದ್ದು ಜನರು ಹೊರಗೆ ಸಂಚಾರ ಮಾಡುವಾಗ ಎಚ್ಚರಿಕೆ ವಹಿಸಬೇಕು, ಸಮುದ್ರಕ್ಕೆ ಇಳಿಯುವ ಮೀನುಗಾರರು ಮುನ್ನೆಚ್ಚರಿಕೆ ವಹಿಸಬೇಕೆಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.

ಮುಂಗಾರು ಚುರುಕು: ರಾಜ್ಯದಲ್ಲಿ ಇನ್ನೂ 4 ದಿನ ಹಲವೆಡೆ  ಮಳೆ!
ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು ಇನ್ನೂ 4 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಕುಕ್ಕೆ ಸುಬ್ರಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ.ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದ ವರೆಗೆ ಭಾರೀ ಮಳೆಯಾಗಲಿದೆ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರ ಮಟ್ಟದಲ್ಲಿ ಗಂಟೆಗೆ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com