ಅಪವಾದ ಹೊತ್ತುಕೊಂಡವರು ಕುಲಪತಿಯಾಗಲು ಬಿಡುವುದಿಲ್ಲ: ಡಾ. ಕೆ.ಸುಧಾಕರ್

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಪತ್ರ ಬರೆದಿದ್ದು, ಕೋವಿಡ್‌ ಇಳಿಮುಖವಾಗುತ್ತಿದ್ದಂತೆ ಚರ್ಚೆ ನಡೆಸುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.
ಆರೋಗ್ಯ ಸಚಿವ ಡಾ. ಕೆ. ಸುಧಾಕರ್
ಆರೋಗ್ಯ ಸಚಿವ ಡಾ. ಕೆ. ಸುಧಾಕರ್

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಪತ್ರ ಬರೆದಿದ್ದು, ಕೋವಿಡ್‌ ಇಳಿಮುಖವಾಗುತ್ತಿದ್ದಂತೆಯೇ ಚರ್ಚೆ ನಡೆಸುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಜತ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಕುಲಪತಿ ನೇಮಕ ಕುರಿತು ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ  ಚರ್ಚಿಸಲಾಗಿದೆ. ಶುದ್ಧ ಚಾರಿತ್ರ್ಯವಿರುವವರು ಕುಲಪತಿಯಾಗಲು ಸಾಧ್ಯ ಎಂದರು.

ಕುಲಪತಿ ಹುದ್ದೆಗೆ ಯಾವ ರೀತಿಯ ಸಂಸ್ಕಾರ, ಯಾವ ರೀತಿಯ ಶೈಕ್ಷಣಿಕ ಅರ್ಹತೆ ಇರುವ ಉತ್ತಮರನ್ನು ತರಬೇಕೆಂಬ ವಿಚಾರದಲ್ಲಿ ಸರ್ಕಾರಕ್ಕೆ ಸ್ಪಷ್ಟತೆ ಇದೆ. ಯಾವುದೇ ಅಪವಾದ ಹೊತ್ತುಕೊಂಡವರು ಕುಲಪತಿ ಕುರ್ಚಿಯಲ್ಲಿ ಕೂರಲು ಸಾಧ್ಯವಿಲ್ಲ. ಕನಿಷ್ಠ ಪಕ್ಷ ತಾವು ಸಚಿವನಾಗಿರುವವರೆಗೂ ಅದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com