ಫೋರ್ಟಿಸ್ ಆಸ್ಪತ್ರೆ ವೈದ್ಯ, ಸಿಬ್ಬಂದಿಗಳ ಮೇಲೆ ಹಲ್ಲೆ: ಠಾಣೆ ಎದುರು ಪ್ರತಿಭಟನೆ

ಫೋರ್ಟಿಸ್ ಆಸ್ಪತ್ರೆ ವೈದ್ಯ ಹಾಗೂ ಸಿಬ್ಬಂದಿಗಳ ಮೇಲೆ ನಡೆದಿರುವ ಹಲ್ಲೆ ಖಂಡಿಸಿ ನಗರದ ಪುಟ್ಟೇನಹಳ್ಳಿ ಠಾಣೆ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಫೋರ್ಟಿಸ್ ಆಸ್ಪತ್ರೆ ವೈದ್ಯ ಹಾಗೂ ಸಿಬ್ಬಂದಿಗಳ ಮೇಲೆ ನಡೆದಿರುವ ಹಲ್ಲೆ ಖಂಡಿಸಿ ನಗರದ ಪುಟ್ಟೇನಹಳ್ಳಿ ಠಾಣೆ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ, ಆಸ್ಪತ್ರೆಯಿಂದ ಠಾಣೆಯವರೆಗೆ ರ‍್ಯಾಲಿ ನಡೆಸಿದರು. ಇದೇ ವೇಳೆ ಭುಜಕ್ಕೆ ಕಪ್ಪು ಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಿದರು.

ಮೇ.5 ರಂದು ವ್ಯಕ್ತಿಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದು, ಜೂನ್ 3 ರಂದು ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಆಸ್ಪತ್ರೆ. ಕೋವಿಡ್ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಜೂನ್.4 ರಂದು ವ್ಯಕ್ತಿಯ ಶ್ವಾಸಕೋಶದಲ್ಲಿ ಗಂಭೀರ ಸ್ವರೂಪದ ಸೋಂಕು ಹಾಗೂ ನ್ಯೂಮೋನಿಯಾ ಇರುವುದು ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ವೈದ್ಯರು ವ್ಯಕ್ತಿಯನ್ನು ಕೋವಿಡೇತರ ಐಸಿಯುವಿದೆ ಸ್ಥಳಾಂತರಿಸಿದ್ದರು. 

ಬಳಿಕ ವ್ಯಕ್ತಿಯ ಚಿಕಿತ್ಸೆ ಸಂಬಂಧ ಸಂಬಂಧಿಕರು ಆಸ್ಪತ್ರೆಯ ವೈದ್ಯರೊಂದಿಗೆ ಮಾತಿನ ಚಕಮಕಿ ನಡೆಸಿದ್ದು, ಈ ವೇಳೆ ವೈದ್ಯರು ಹಾಗೂ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. 

ಹಲ್ಲೆ ನಡೆಸಿದ ಪರಿಣಾಮ ವೈದ್ಯರೊಬ್ಬರ ತಲೆಗೆ ಗಂಭೀರವಾದ ಗಾಯವಾಗಿದ್ದು, ನರ್ಸ್ ಹೊಟ್ಟೆಗೆ ತೀವ್ರ ಗಾಯವಾಗಿರುವುದಾಗಿ ಹೇಳಲಾಗುತ್ತಿದೆ. 

ಯಾವುದೇ ಪ್ರದೇಶದಲ್ಲಿಯೇ ಆದರೂ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಮೇಲೆ ನಡೆಸಲಾಗುವ ಹಲ್ಲೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಫೋರ್ಟಿಸ್‌ ಆಸ್ಪತ್ರೆಯಲ್ಲಿ ನಾವು ಯಾವುದೇ ರೀತಿಯ ದೈಹಿಕ ಅಥವಾ ಮೌಖಿಕ ನಿಂದನೆಗಳನ್ನು ಸಹಿಸುವುದಿಲ್ಲ ಎಂದು ಪ್ರತಿಭಟನಾನಿರತ ವೈದ್ಯರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com