ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನದಡಿ ರೈತರಿಗೆ ಉಚಿತ ಬಿತ್ತನೆ ಬೀಜ: ಬಿ.ಸಿ. ಪಾಟೀಲ್

ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ’ (ಎನ್‌ಎಫ್‌ಎಸ್‌ಎಂ) ಯೋಜನೆಯಡಿ ರೈತರಿಗೆ ಬಿತ್ತನೆ ಬೀಜ ಉಚಿತವಾಗಿ ನೀಡಲಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದ್ದಾರೆ. 
ಬಿಸಿ ಪಾಟೀಲ್
ಬಿಸಿ ಪಾಟೀಲ್

ಬೆಂಗಳೂರು: ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ’ (ಎನ್‌ಎಫ್‌ಎಸ್‌ಎಂ) ಯೋಜನೆಯಡಿ ರೈತರಿಗೆ ಬಿತ್ತನೆ ಬೀಜ ಉಚಿತವಾಗಿ ನೀಡಲಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದ್ದಾರೆ. 

ರಾಜ್ಯದಲ್ಲಿ ಮುಂಗಾರು ಹಂಗಾಮಿನ ಬಿತ್ತನೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಹೆಚ್ಚು ಪ್ರಮಾಣದಲ್ಲಿ ಬಿತ್ತನೆಯಾಗಲು ಎಲ್ಲಾ ರೀತಿ ಕ್ರಮ ಕೈಗೊಂಡಿದ್ದೇವೆ ಎಂದು ಬಿ.ಸಿ.ಪಾಟೀಲ್‌ ಹೇಳಿದ್ದಾರೆ. 

ತೊಗರಿ, ಹೆಸರು, ಶೇಂಗಾ, ಸೋಯಾ, ಅವರೆ ಬೆಳೆಗಳ ವಿಸ್ತೀರ್ಣ ಹಾಗೂ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಉತ್ತೇಜನ ನೀಡಲು ರೈತರಿಗೆ ಪ್ರಮುಖವಾಗಿ ಬೆಳೆಯುವ 19 ಜಿಲ್ಲೆಗಳಲ್ಲಿ ಬಿತ್ತನೆ ಬೀಜಗಳನ್ನು ಮಿನಿ ಕಿಟ್‌ ರೂಪದಲ್ಲಿ ಈವರೆಗೆ 12.60 ಕೋಟಿ ಮೌಲ್ಯದ ಮಿನಿ ಕಿಟ್‌ ವಿತರಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಇನ್ನು 2020-21 ನೇ ಸಾಲಿನಲ್ಲಿ 153.08 ಲಕ್ಷ ಆಹಾರ ಧಾನ್ಯಗಳ ಉತ್ಪಾದನೆ ಆಗಿದೆ. ದೇಶದ ಸರಾಸರಿಗೆ ಹೋಲಿಸಿದರೆ ಶೇ. 2 ರಷ್ಟು ಹಾಗೂ ರಾಜ್ಯದ ಸರಾಸರಿಗೆ ಹೋಲಿಸಿದರೆ ಶೇ. 10 ರಷ್ಟು ಹೆಚ್ಚಿನ‌ ಉತ್ಪಾದನೆ ಆಗಿದೆ ಎಂದು ಕೃಷಿ ಸಚಿವರು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com