ಅನ್'ಲಾಕ್ ಇದ್ದರೂ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಕೆ!

ರಾಜ್ಯದಲ್ಲಿ ಸರ್ಕಾರ ಲಾಕ್ಡೌನ್ ನಿಯಮಗಳನ್ನು ಸಡಿಲಿಕೆ ಮಾಡಿದ್ದರೂ ಕೂಡ ಬೆಂಗಳೂರು ನಗರದಲ್ಲಿ ಜೂನ್ 12 ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಮುಂದುವರೆಯಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹೇಳಿದ್ದಾರೆ. 

Published: 15th June 2021 09:09 AM  |   Last Updated: 15th June 2021 01:04 PM   |  A+A-


With some relaxations made to lockdown norms, vehicles seen caught in a traffic jam on NR Road, near Town Hall, in Bengaluru on Monday

ನಗರದಲ್ಲಿ ಸಂಚಾರ ದಟ್ಟಣೆ

Posted By : Manjula VN
Source : The New Indian Express

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಲಾಕ್ಡೌನ್ ನಿಯಮಗಳನ್ನು ಸಡಿಲಿಕೆ ಮಾಡಿದ್ದರೂ ಕೂಡ ಬೆಂಗಳೂರು ನಗರದಲ್ಲಿ ಜೂನ್ 12 ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಮುಂದುವರೆಯಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹೇಳಿದ್ದಾರೆ. 

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮೌಖಿಕ ಆದೇಶ ನೀಡಿದ್ದು, ಆದೇಶದಂತೆ ನಗರದಲ್ಲಿ ಒಂದೆಡೆ 4ಕ್ಕಿಂತಲೂ ಹೆಚ್ಚು ಜನರು ಸೇರುವಂತಿಲ್ಲ ಎಂದು ತಿಳಿಸಲಾಗಿದೆ. ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಿಗೆ ತೆರಳುವವರಿಗೆ ವಿನಾಯಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ. 

ಬೆಂಗಳೂರಿನಲ್ಲಿ ಸೋಂಕು ಇಳಿಕೆಯಾಗುತ್ತಿದೆ. ಆದರೂ ನಾವು ಸಾಕಷ್ಟು ಎಚ್ಚರಿಕೆಗಳಿಂದ ಇರಬೇಕಿದೆ. ಸೋಂಕು ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ತಿಳಿಸಲಾಗಿದೆ. 

ಆದೇಶ ಹಿನ್ನೆಲೆಯಲ್ಲಿ ಈಗಾಗಲೇ ಫೀಲ್ಡ್ ಗಿಳಿದಿರುವ ಪೊಲೀಸರು ಅನಗತ್ಯ ಓಡಾಡ ಮಾಡುತ್ತಿರುವ ವಾಹನಗಳನ್ನು ಸೀಜ್ ಮಾಡುತ್ತಿದ್ದಾರೆ. ಮೆಜೆಸ್ಟಿಕ್ ನಲ್ಲಿ ವಾಹನಗಳನ್ನು ತೀವ್ರ ತಪಾಸಣೆ ನಡೆಸಲಾಗುತ್ತಿದೆ.

ಆದೇಶದ ಸೂಚನೆಗಳೂ ಇಂತಿವೆ...

  • ಸಂಜೆ 7 ರಿಂದ ಬೆಳಿಗ್ಗೆ 5 ರ ವರೆಗೆ ನೈಟ್ ಕರ್ಫ್ಯೂ ಜಾರಿ
  • ರೋಗಿಗಳನ್ನ ಕರೆದೊಯ್ಯುವಾಗ ಸಂಬಂಧಪಟ್ಟವರಿಗೆ ಮಾತ್ರ ಅವಕಾಶ
  • ಯಾವುದೇ ಕಂಪನಿ ಹಾಗೂ ಕೈಗಾರಿಕಾ ಉದ್ಯೋಗಿಗಳು ಪಾಸ್ ಹೊಂದಿರಬೇಕು 
  • ಟೆಲಿಕಾಂ ಹಾಗೂ ಇಂಟರ್ನೆಟ್ ಸರ್ವೀಸಸ್ ವರ್ಕರ್ಸ್ ತಮ್ಮ ಐಡಿಕಾರ್ಡ್ ಗಳನ್ನ ಹೊಂದಿರಲೇ ಬೇಕು
  • ಮೆಡಿಕಲ್ ಎಮರ್ಜೆನ್ಸಿ ಹಾಗೂ ಅಗತ್ಯ ಸರಬರಾಜು ವಾಹನಗಳಿಗೆ ಅವಕಾಶ
  • ಅಗತ್ಯ ಸರಕು ಸಾಗಾಟ ವಾಹನಗಳಿಗೆ ಅವಕಾಶ
  • ವಿಮಾನ ನಿಲ್ದಾಣ, ರೈಲ್ವೆ ಸೇರಿದಂತೆ ಓಡಾಟಕ್ಕೆ ಸೂಕ್ತ ಮಾಹಿತಿ‌ ಒದಗಿಸಬೇಕು.

Stay up to date on all the latest ರಾಜ್ಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp