ಸಿಎಂ ಸ್ಥಾನದಿಂದ ಬಿಎಸ್ ವೈ ಕೆಳಗಿಳಿಸುವ ಹುನ್ನಾರ ಮಾಡಿದರೆ ಸಹಿಸುವುದಿಲ್ಲ: ವೀರಶೈವ ಶ್ರೀಗಳ ಎಚ್ಚರಿಕೆ

ಮುಖ್ಯಮಂತ್ರಿ ಯಡಿಯೂರಪ್ಪನವರ ಗೌರವಕ್ಕೆ ಧಕ್ಕೆ ಉಂಟು ಮಾಡುವ ರೀತಿ ಅನಾವಶ್ಯಕವಾಗಿ ಹೇಳಿಕೆ ನೀಡಿ ಅವರ ಮನಸ್ಸಿಗೆ ನೋವುಂಟು ಮಾಡುವಂತೆ ನಡೆದುಕೊಳ್ಳುತ್ತಿರುವುದು ಸಹಿಸಲಾಗದು.

Published: 15th June 2021 08:43 AM  |   Last Updated: 15th June 2021 01:01 PM   |  A+A-


Veerashaiva-Lingayat religious  heads at a meeting at Shadakshara Mutt in Tiptur

ತಿಪಟೂರಿನಲ್ಲಿ ರುದ್ರಮುನಿಸ್ವಾಮಿಗಳ ಪತ್ರಿಕಾಗೋಷ್ಠಿ

Posted By : Shilpa D
Source : The New Indian Express

ತುಮಕೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ಗೌರವಕ್ಕೆ ಧಕ್ಕೆ ಉಂಟು ಮಾಡುವ ರೀತಿ ಅನಾವಶ್ಯಕವಾಗಿ ಹೇಳಿಕೆ ನೀಡಿ ಅವರ ಮನಸ್ಸಿಗೆ ನೋವುಂಟು ಮಾಡುವಂತೆ ನಡೆದುಕೊಳ್ಳುತ್ತಿರುವುದು ವೀರಶೈವ ಲಿಂಗಾಯತ ಸಮಾಜಕ್ಕೆ ಮಾಡುವ ಅವಮಾನ ಎಂದು ತಿಪಟೂರಿನ ಷಡಕ್ಷರ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಿಪಟೂರಿನಲ್ಲಿ ಸಭೆ ಸೇರಿದ್ದ 10 ವಿವಿಧ ಮಠಗಳ ಮಠಾಧೀಶರು ತುರ್ತು ಪ್ರತಿಕಾಗೋಷ್ಠಿ ನಡೆಸಿ, ಯಡಿಯೂರಪ್ಪನವರು ಅಧಿಕಾರವನ್ನು ಪೂರ್ಣಗೊಳಿಸಲು ಎಲ್ಲರೂ ಬೆಂಬಲ ನೀಡಬೇಕು. ಸಿಎಂ ಸ್ಥಾನದಿಂದ ಬಿಎಸ್​ವೈ ಅವರನ್ನು ಕೆಳಗಿಳಿಸುವ ಹುನ್ನಾರವನ್ನು ಯಾವುದೇ ಕಾರಣಕ್ಕೂ ವೀರಶೈವ ಲಿಂಗಾಯತ ಸಮಾಜ ಸಹಿಸುವುದಿಲ್ಲ. ಕುತಂತ್ರ ನಡೆದಲ್ಲಿ
ಸ್ವಾಮೀಜಿಗಳ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಯಡಿಯೂರಪ್ಪ ಅವರು ಎಲ್ಲಾ ಸಮುದಾಯದ ಪ್ರಶ್ನಾತೀತ ನಾಯಕರಾಗಿದ್ದಾರೆ, ಸಿಎಂ ಆಗಿ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ, ಅವರು ತಮ್ಮ ಅಧಿಕಾರವಧಿಯನ್ನು ಸಂಪೂರ್ಣಗೊಳಿಸಲು ಬಿಜೆಪಿ ಹೈಕಮಾಂಡ್ ಅವಕಾಶ ಮಾಡಿಕೊಡಬೇಕೆಂದು ಸ್ವಾಮೀಜಿಗಳು ಆಗ್ರಹಿಸಿದ್ದಾರೆ.


Stay up to date on all the latest ರಾಜ್ಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp