ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಇಳಿಕೆ: ಇನ್ನಷ್ಟು ಅನ್'ಲಾಕ್ ಸುಳಿವು ನೀಡಿದ ಸಿಎಂ ಯಡಿಯೂರಪ್ಪ!

ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಇಳಿಕೆಯಾಗುತ್ತಿದ್ದು, ಈ ಬೆಳವಣಿಗೆ ಬೆನ್ನಲ್ಲೇ ರಾಜ್ಯದಲ್ಲಿ ಮುಂದಿನ ವಾರದಲ್ಲಿ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಕೆ ಮಾಡುವ ಸುಳಿವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ನೀಡಿದ್ದಾರೆ. 
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಇಳಿಕೆಯಾಗುತ್ತಿದ್ದು, ಈ ಬೆಳವಣಿಗೆ ಬೆನ್ನಲ್ಲೇ ರಾಜ್ಯದಲ್ಲಿ ಮುಂದಿನ ವಾರದಲ್ಲಿ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಕೆ ಮಾಡುವ ಸುಳಿವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ನೀಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಕೋವಿಡ್ ನಿಯಂತ್ರಣಕ್ಕೆ ಬಂದಿರುವ ಬಗ್ಗೆ ಸಚಿವರು ಹಾಗೂ ಅಧಿಕಾರಿಗಳ ಬಳಿ ಚರ್ಚೆ ನಡೆಸಿ ಮಾಹಿತಿ ಪಡೆಯಲಾಗುವುದು. ಎರಡನೇ ಹಂತದಲ್ಲಿ ಯಾವುದಕ್ಕೆ ಎಲ್ಲಾ ವಿನಾಯಿತಿ ಕೊಡಬಹುದು ಎಂಬುದರ ಬಗ್ಗೆ ಯೋಚನೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. 

ಈಗಾಗಲೇ ಮೊದಲ ಹಂತದಲ್ಲಿ 19 ಜಿಲ್ಲೆಗಳಲ್ಲಿ ಸಡಿಲಿಕೆ ಮಾಡಲಾಗಿದೆ. ಇನ್ನುಳಿದ 11 ಜಿಲ್ಲೆಗಳಲ್ಲಿ (ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ ಜಿಲ್ಲೆ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ ಮತ್ತು ಕೊಡಗು )ಸೆಮಿ ಲಾಕ್'ಡೌನ್ ಯಥಾರೀತಿ ಮುಂದುವರೆದಿದೆ. ಹೀಗಾಗಿ ಈ ತಿಂಗಳ 21ರಿಂದ ಸಡಿಲಿಕೆ ವ್ಯಾಪ್ತಿಗೆ ಈಗಿರುವ 19 ಜಿಲ್ಲೆಗಳ ಜೊತೆಗೆ ಇನ್ನಷ್ಟು ಜಿಲ್ಲೆಗಳು ಸೇರ್ಪಡೆಯಾಗುವ ಸಂಭವವಿದೆ. ಆ ಜಿಲ್ಲೆಗಳ ಕೋವಿಡ್ ಪಾಸಿಟಿವಿಟಿ ದರ ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಹಿಂದೆ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜನರೂ ಕೊರೋನಾ ನಿಯಮಗಳನ್ನು ಪಾಲನೆ ಮಾಡಿ, ಪಾಸಿಟಿವಿಟಿ ಪ್ರಮಾಣ ಕಡಿಮೆಯಾದರೆ ಮಾತ್ರ ನಿಯಮಗಳನ್ನು ಸಡಿಲ ಮಾಡಲಾಗುತ್ತದೆ. ಈ ಕುರಿತ ನಿರ್ಧಾರವನ್ನು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಬಳಿಕವಷ್ಟೇ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದರು. 

ಸಚಿವ ಡಾ.ಸುಧಾಕರ್ ಅವರು ಮಾತನಾಡಿ, ಕೆಲವು ಜಿಲ್ಲೆಗಳಲ್ಲಿ ಲಾಕ್ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಿದ ಬಳಿಕವೂ ನಾವು ಬಹಳ ಎಚ್ಚರಿಕೆಯಿಂದ ಇರುತ್ತೇವೆ. ಪರಿಣಾಮಕಾರಿ ರೀತಿಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ರಾಜ್ಯದಲ್ಲಿ ಮಂಗಳವಾರ ಒಂದೇ ದಿನ 1.32 ಲಕ್ಷ ಜನರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com