ಬೆಂಗಳೂರು: ಕೊಕೇನ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಅರೆಸ್ಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊಕೇನ್ ಮಾರಾಟ ಮಾಡಿದ್ದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ನೈಜೀರಿಯಾದ ಪ್ರಜೆಯನ್ನು ಬಂಧಿಸಿದ್ದಾರೆ. ಬಂಧಿತನಿಂದ  ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊಕೇನ್ ಮಾರಾಟ ಮಾಡಿದ್ದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ನೈಜೀರಿಯಾದ ಪ್ರಜೆಯನ್ನು ಬಂಧಿಸಿದ್ದಾರೆ. ಬಂಧಿತನಿಂದ  ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬಂಧಿತನನ್ನು ನೈಜೀರಿಯಾದ ಕೆಲ್ವಿನ್ ಇಡಿಕಾ (24) ಎಂದು ಗುರುತಿಸಲಾಗಿದೆ.

ಬೆಂಗಳೂರು ಸಿಸಿಬಿಯ ಮಾದಕವಸ್ತು ವಿರೋಧಿ ವಿಭಾಗವು ಹೇಳಿಕೆ ನೀಡಿದಂತೆ ಆರೋಪಿಯು ವಿದ್ಯಾರ್ಥಿ ವೀಸಾದ ಮೇಲೆ ಬೆಂಗಳೂರಿಗೆ ಆಗಮಿಸಿದ್ದ, ಮಾದಕ ದ್ರವ್ಯ ಸೇವನೆಯಲ್ಲಿ ತೊಡಗಿದ್ದ

ಸುಳಿವು ಆಧರಿಸಿ, ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಯು ಹೊರಾಮಾವು ಸಿಗ್ನಲ್ ಬಳಿ ಗ್ರಾಹಕರೊಂದಿಗೆ ಮಾತುಕತೆ ನಡೆಸುತ್ತಿದ್ದ ವೇಳೆ  ಬಂಧಿಸಲಾಯಿತು. ಬಂಧನದ ಸಮಯದಲ್ಲಿಆತ 54 ಗ್ರಾಂ ಕೊಕೇನ್ ಹೊಂದಿದ್ದ. ಇದಕ್ಕೆ ಸುಮಾರು 4 ಲಕ್ಷ ರೂ. ಮೌಲ್ಯವಿದೆ. ಜತೆಗೆ ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ಮೂರು ಮೊಬೈಲ್ ಫೋನ್ ಸಹ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿ
ಬಂಧಿತ ಆರೋಪಿ

ಪೊಲೀಸರ ಪ್ರಕಾರ, ಆರೋಪಿ ಆಗಾಗ್ಗೆ ಮುಂಬೈಗೆ ಪ್ರಯಾಣಿಸುತ್ತಿದ್ದ, ಕೊಕೇನ್ ಅನ್ನು ಅಲ್ಲಿಂದ ಖರೀದಿಸಿ ಇಲ್ಲಿ ಮಾರಾಟ ಮಾಡುತ್ತಿದ್ದ ಪ್ರಸ್ತುತ ಪೊಲೀಸರು ಪ್ರಕರಣ ದಾಖಲಿಸಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com