ಡಿಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ 115 ಮಂದಿ ಆರೋಪಿಗಳಿಗೆ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ 115 ಮಂದಿ ಆರೋಪಿಗಳಿಗೆ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ. 

ಪ್ರಕರಣದ ತನಿಖೆ ಪೂರ್ಣಗೊಳಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) 90 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಿದ ವಿಶೇಷ  ಕೋರ್ಟ್ ಕ್ರಮ ಪ್ರಶ್ನಿಸಿ ಮುಜಾಮಿಲ್ ಸೇರಿ 115 ಆರೋಪಿಗಳು ಹೈಕೋರ್ಟ್'ಗೆ ಅರ್ಜಿ ಸಲ್ಲಿಸಿದ್ದರು.

ಅಲ್ಲದೆ, ಎನ್ಐಎ 90 ದಿನಗಳಲ್ಲಿ ತನಿಖೆಯು ಅಂತಿಮ ವರದಿ ಸಲ್ಲಿಸದ ಹಿನ್ನೆಲೆಯಲ್ಲಿ ಡೀಫಾಲ್ಟ್ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ನ್ಯಾಯಪೀಠ, ಸುಪ್ರೀಂಕೋರ್ಟ್ ನಿರ್ದೇಶನ ಪ್ರಕಾರ ತನಿಖಾ ಅವಧಇ ವಿಸ್ತರಣೆಗೆ ಕೋರಿ ಅರ್ಜಿ ಸಲ್ಲಿಸಿದ ವಿಚಾರವನ್ನು ಆರೋಪಿಗಳ ಗಮನಕ್ಕೆ ತರಬೇಕು. 

ಆ ಕುರಿತು ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ, ಅವರ ವಾದವನ್ನೂ ಆಲಿಸಬೇಕು. ಆದರೆ, ಪ್ರಕರಣದಲ್ಲಿ ಆಱೋಪಿಗಳ ಗಮನಕ್ಕೆ ತರದೆ, ತನಿಖಾ ಅವಧಿ ವಿಸ್ತರಿಸಿ ವಿಶೇಷ ನ್ಯಾಯಾಲಯ (ಎನ್ಐಎ) ಹೊರಡಿಸಿರುವ ಆದೇಶ ಕಾನೂನು ಬಾಹಿರವಾಗಿದೆ. ಹೀಗಾಗಿ ಅರ್ಜಿದಾರರು ಜಾಮೀನು ಪಡೆಯಲು ಅರ್ಹರಾಗಿದ್ದಾರೆಂದು ಎಂದಿತು. 

ಅರ್ಜಿದಾರ ಆರೋಪಿಗಳು ತಲಾ ಎರಡು ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್, ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಣಾ ನ್ಯಾಯಾಲಯ ಮತ್ತು ತನಿಖಾಧಿಕಾರಿಗಳು ಕರೆದಾಗ ತಪ್ಪದೇ ಹಾಜರಾಗಬೇಕು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶಇಸಿದೆ. 

‘ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಲಾಗಿದೆ’ ಎಂದು ಆರೋಪಿಸಿ 500ಕ್ಕೂ ಹೆಚ್ಚು ಜನರು, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್‌ ಬೈರಸಂದ್ರದಲ್ಲಿ 2020ರ ಆಗಸ್ಟ್​ 10ರಂದು ವಾಹನಗಳಿಗೆ ಬೆಂಕಿಹಚ್ಚಿ, ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯ ಮೇಲೆಯೂ ಕೆಲವರು ದಾಳಿ ಮಾಡಿದ್ದರು.

ಪೊಲೀಸರ ಗುಂಡೇಟಿಗೆ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದರು. ಅವಹೇಳನಕಾರಿ ಪೋಸ್ಟ್ ಹಾಕಿದ್ದ ಎನ್ನಲಾದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಘಟನೆಗೆ ಸಂಬಂಧಿಸಿದಂತೆ 111 ಜನರನ್ನು ಪೊಲೀಸರು ಬಂಧಿಸಿದ್ದರು. ಹಿಂಸಾಚಾರದಲ್ಲಿ 500ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು ಎಂದು ಹೇಳಲಾಗಿತ್ತು.

ಪ್ರಕರಣದ ತನಿಖೆಯನ್ನು ಪೂರ್ಣಗೊಳಇಸಬೇಕಾದ 90 ದಿನಗಳ ಅವಧಿ 2020ರ ನ.9ಕ್ಕೆ ಮುಗಿದಿತ್ತು. ಇದರಿಂದ ನ.3ಕ್ಕೆ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಎನ್ಐಎ, ತನಿಖಾ ಅವಧಿ ವಿಸ್ತರಿಸುವಂತೆ ಕೋರಿತ್ತು. ಅದೇ ದಿನ ತನಿಖಾ ಅವಧಿಯನ್ನು 90 ದಿನಗಳ ಕಾಲ ವಿಸ್ತರಿಸಿ ವಿಶೇಷ ನ್ಯಾಯಾಲಯವು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್'ಗೆ ಅರ್ಜಿ ಸಲ್ಲಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com