ಬೆಳಗಾವಿಯಲ್ಲಿ ಧಾರಾಕಾರ ಮಳೆ: ರಸ್ತೆಗಳ ಕಾಮಗಾರಿ ಅಪೂರ್ಣ; ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಪರದಾಟ!

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ಗುಂಡಿಗಳು ಮಾರ್ಪಟ್ಟಿವೆ, ಇದರಿಂದಾಗಿ ವಾಹನ ಸವಾರರು ಸಂಕಷ್ಟ ಎದುರಿಸುತ್ತಿದ್ದಾರೆ.
ಬೆಳಗಾವಿ ರಸ್ತೆ
ಬೆಳಗಾವಿ ರಸ್ತೆ

ಬೆಳಗಾವಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು ಗುಂಡಿಗಳು ಮಾರ್ಪಟ್ಟಿವೆ, ಇದರಿಂದಾಗಿ ವಾಹನ ಸವಾರರು ಸಂಕಷ್ಟ ಎದುರಿಸುತ್ತಿದ್ದಾರೆ.

ಖಾನಾಪುರ-ಅನ್ಮೋಡ್ ರಾಷ್ಟ್ರೀಯ ಹೆದ್ದಾರಿ-4ರ ರಸ್ತೆ ಅಗಲೀಕರಣ ಕಾಮಗಾರಿ ಅಪೂರ್ಣಗೊಂಡಿರುವುದು ವಾಹನ ಚಾಲಕರಿಗೆ ಅಪಾಯ ತಂದಿಟ್ಟಿದೆ. ರಸ್ತೆ ಅಗಲೀಕರಣಕ್ಕಾಗಿ ಸಾವಿರಾರು ಮರಗಳನ್ನು ಕಡಿಯುವುದರ ವಿರುದ್ಧ ಪರಿಸರವಾದಿಗಳು ಸಲ್ಲಿಸಿದ್ದ ಮನವಿಯ ಕಾರಣ ಹಠಾತ್ತನೆ ನಿಲ್ಲಿಸಿದ್ದರಿಂದ ರಸ್ತೆ ಕಾಮಗಾರಿ ಅಪೂರ್ಣವಾಗಿದೆ.

ಹೆದ್ದಾರಿ ಕಾಮಗಾರಿ ಅಪೂರ್ಣಗೊಂಡಿರುವುದರ ಹಿನ್ನೆಲೆಯಲ್ಲಿ ಸರಕು ತುಂಬಿದ ಲಾರಿಗಳು ರಸ್ತೆಯಲ್ಲಿ ಪ್ರಯಾಸ ಪಡುವಂತಾಗಿದೆ. ಖಾನಾಪುರ ಮತ್ತು ಬೆಳಗಾವಿ ನಡುವೆ ಎನ್‌ಎಚ್4ಎ  25 ಕಿ.ಮೀ ವಿಸ್ತರಣೆಯ ಕೆಲಸ ಬಹುತೇಕ ಪೂರ್ಣಗೊಂಡಿದೆ, ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರ ಕಾಮಗಾರಿ ಪೂರ್ಣಗೊಳಿಸಲು ತೋರಿದ ನಿರ್ಲಕ್ಷ್ಯ ವಿಳಂಬವಾಗಲು ಕಾರಣ ಎಂದು ಖಾನಾಪುರ ತಾಲ್ಲೂಕು ನಿವಾಸಿಗಳು ಆರೋಪಿಸಿದ್ದಾರೆ.

ಕಾಮಗಾರಿ ಪೂರ್ಣಗೊಳಿಸಲು ಸಂಸದ ಅನಂತ್ ಕುಮಾರ್ ಹೆಗ್ಡೆ ಯಾವುದೇ ಪ್ರಯತ್ನ ಮಾಡಲಿಲ್ಲ, ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಬೇಕೆಂದು ಚುನಾಯಿತ ಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಮಾಡಿದ ಮನವಿಗೆ ಯಾವುದೇ ಸ್ಪಂದನೆ ದೊರೆತಿಲ್ಲ.

ರಸ್ತೆ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಚುನಾಯಿತ ಸಂಸದರೇ ರಸ್ತೆಗೆ ಅನುಮತಿ ಪಡೆಯುವಲ್ಲಿ ಕೇಂದ್ರಕ್ಕೆ ಮನವಿ ಮಾಡಬೇಕಾಗಿದೆ. ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದಾರೆ ಎಂದು ಖಾನಾಪುರ ಮೂಲದ ಕಾರ್ಯಕರ್ತ ದಿನಾರ್ ಮರಗಲೆ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com