
ಸಂಗ್ರಹ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 5,983 ಮಂದಿಗೆ ಕೊರೋನಾ ಕಾಣಿಸಿಕೊಂಡಿದ್ದು, 10,685 ಮಂದಿ ಡಿಸ್ಚಾರ್ಜ್ ಆಗಿದ್ದರೆ, 138 ಮಂದಿ ಸಾವನ್ನಪ್ಪಿದ್ದಾರೆ.
ಬೆಂಗಳೂರು ನಗರದಲ್ಲಿ 1,209 ಮಂದಿಗೆ ಕೊರೋನಾ ಸೋಂಕು ತಗುಲಿದ್ದರೆ 17 ಮಂದಿ ಮೃತಪಟ್ಟು 1,510 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ ಒಟ್ಟಾರೆ 1,58,442 ಟೆಸ್ಟ್ ಮಾಡಲಾಗಿದೆ.
ಇನ್ನು ಒಂದೇ ದಿನ ರಾಜ್ಯದಲ್ಲಿ 138 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 33,434 ಜನರು ಕೊರೋನಾಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು 2,79,0338 ಮಂದಿಗೆ ಕೊರೋನಾ ಸೋಂಕು ದೃಢವಾಗಿದ್ದು ಇವರ ಪೈಕಿ 2,61,0157 ಮಂದಿ ಆಸ್ಪತ್ರೆಯಿಂದ ಗುಣಮುಖವಾಗಿ ಮನೆಗೆ ಹಿಂತಿರುಗಿದ್ದಾರೆ. ಇಂದು ರಾಜ್ಯದಲ್ಲಿ ಒಟ್ಟು 1,46,726 ಸಕ್ರಿಯ ಪ್ರಕರಣಗಳಿದೆ.
ಇಂದಿನ 17/06/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/95tbnXcMGo
— K'taka Health Dept (@DHFWKA) June 17, 2021
@CMofKarnataka @drashwathcn@GovindKarjol @LaxmanSavadi @mla_sudhakar @BBMPCOMM @DC_Dharwad @DCKodagu @dcudupi @DCDK9 @mysurucitycorp @mangalurucorp @CEOUdupi pic.twitter.com/LipOB7W94O