ಧರ್ಮಸ್ಥಳ ವಿರುದ್ಧ ಅಪಪ್ರಚಾರ: ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷರಿಗೆ 3 ತಿಂಗಳ ಜೈಲು ಶಿಕ್ಷೆ

ನ್ಯಾಯಾಲಯದ ತಡೆಯಾಜ್ಞೆಯನ್ನು ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ದುರುದ್ದೇಶಪೂರಿತ ಅಪಪ್ರಚಾರ ಮಾಡಿದ ಪ್ರಕರಣದಲ್ಲಿ ನಾಗರಿಕ ಸೇವಾ ಟ್ರಸ್ಟ್, ಗುರುವಾಯನಕೆರೆ ಅಧ್ಯಕ್ಷ ಕೆ.ಸೋಮನಾಥ್ ನಾಯಕ್ ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಬೆಳ್ತಂಗಡಿ ನ್ಯಾಯಾಲಯ ತನ್ನ ಈ ಹಿಂದಿನ ಆದೇಶವನ್ನು ಎತ್ತಿಹಿಡಿದಿದೆ,
ಧರ್ಮಸ್ಥಳ
ಧರ್ಮಸ್ಥಳ

ಬೆಳ್ತಂಗಡಿ: ನ್ಯಾಯಾಲಯದ ತಡೆಯಾಜ್ಞೆಯನ್ನು ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ದುರುದ್ದೇಶಪೂರಿತ ಅಪಪ್ರಚಾರ ಮಾಡಿದ ಪ್ರಕರಣದಲ್ಲಿ ನಾಗರಿಕ ಸೇವಾ ಟ್ರಸ್ಟ್, ಗುರುವಾಯನಕೆರೆ ಅಧ್ಯಕ್ಷ ಕೆ.ಸೋಮನಾಥ್ ನಾಯಕ್ ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಬೆಳ್ತಂಗಡಿ ನ್ಯಾಯಾಲಯ ತನ್ನ ಈ ಹಿಂದಿನ ಆದೇಶವನ್ನು ಎತ್ತಿಹಿಡಿದಿದೆ,

ಮೂರು ತಿಂಗಳ ಜೈಲು ಶಿಕ್ಷೆಯ ಹೊರತಾಗಿ, ಕ್ಷೇತ್ರಕ್ಕೆ 4.5 ಲಕ್ಷ ರೂ.ಗಳ ಪರಿಹಾರವನ್ನು ಪಾವತಿಸಲು ನಾಯಕ್ ಒಡೆತನದ ಸ್ಥಿರಾಸ್ತಿಯನ್ನು ಲಗತ್ತಿಸಲು ನ್ಯಾಯಾಲಯ ಆದೇಶಿಸಿದೆ.

ಅವರ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ ಎಂದು ತಿಳಿದಿದ್ದರೂ ಶ್ರೀ ಕ್ಷೇತ್ರದ ಬಗ್ಗೆ ಅಪಪ್ರಾಚಾರ ನಡೆಸಿದ್ದಕ್ಕಾಗಿ ಹೆಚ್ಚುವರಿ 2,000 ರೂಪಾಯಿಗಳನ್ನು ಪರಿಹಾರವಾಗಿ ಪಾವತಿಸುವಂತೆ ನ್ಯಾಯಾಲಯವು ನಿರ್ದೇಶಿಸಿದೆ 

ಕೆ.ಸೋಮನಾಥ್ ನಾಯಕ್ ಮತ್ತು ಇತರರ ವಿರುದ್ಧ ಶ್ರೀ ಕ್ಷೇತ್ರ ಧರ್ಮಾಸ್ಥಳ, ಧರ್ಮಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಕುಟುಂಬ ಮತ್ತು ಇತರ ಸಂಘಟನೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಅನುಸರಿಸಿ ಬೆಳ್ತಂಗಡಿ  ಹೆಚ್ಚುವರಿ ಸಿವಿಲ್ ನ್ಯಾಯಾಲಯವು 2013 ರಲ್ಲಿ ತಡೆಯಾಜ್ಞೆಯನ್ನು ಜಾರಿಗೊಳಿಸಿತ್ತು. ಈ ಆದೇಶವನ್ನು ನಿರಂತರವಾಗಿ ಉಲ್ಲಂಘಿಸಲಾಗಿದೆ ಮತ್ತು ಕಾನೂನು ಕ್ರಮ ಕೋರಿ ಬಿ ವರ್ಧಮಾನ್ ಕ್ಷೇತ್ರದ ಪರವಾಗಿ ನ್ಯಾಯಾಲಯಕ್ಕೆ ತೆರಳಿದ್ದರು ಎಂದು ಆರೋಪಿಸಲಾಗಿದೆ.

ಸುದೀರ್ಘ ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಈ ಹಿಂದೆ ನಾಯಕ್‌ಗೆ ಎರಡು ಬಾರಿ ಶಿಕ್ಷೆ ವಿಧಿಸಲಾಗಿತ್ತು ಎಂಬ ಅಂಶವನ್ನು ಗಮನಕ್ಕೆ ತೆಗೆದುಕೊಂಡಿತು ಆದರೆ ಅವರು ಮಾಡಿದ ಮೇಲ್ಮನವಿಯನ್ನು ಅನುಸರಿಸಿ, ಪ್ರಕರಣವನ್ನು ಹೆಚ್ಚುವರಿ ವಿಚಾರಣೆಗೆ ಮೂಲ ನ್ಯಾಯಾಲಯಕ್ಕೆ ಕಳುಹಿಸಲಾಗಿದೆ. ಹಿಂದಿನ ತೀರ್ಪನ್ನು ನ್ಯಾಯಾಲಯ ಈಗ ಎತ್ತಿಹಿಡಿದಿದ್ದು, ನಾಯಕ್‌ಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com