ಬಿಬಿಎಂಪಿ ಆರೋಗ್ಯ ವಿಶೇಷ ಆಯುಕ್ತರಾಗಿ ರಣದೀಪ್ ನೇಮಕ
ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರು. ಇದರಂತೆ ಬಿಬಿಎಂಪಿಯ ಘನ ತ್ಯಾಜ್ಯ ನಿರ್ವಹಣೆಯ ವಿಶೇಷ ಆಯುಕ್ತರಾಗಿದ್ದ ರಣದೀಪ್.ಡಿ ಅವರನ್ನು ಬಿಬಿಎಂಪಿ ಆರೋಗ್ಯ ಮತ್ತು ಮಾಹಿತಿ ತಂತ್ರಜ್ಞಾನದ ವಿಶೇಷ ಆಯುಕ್ತರಾಗಿ ನೇಮಕ ಮಾಡಲಾಗಿದೆ.
Published: 17th June 2021 08:27 AM | Last Updated: 17th June 2021 01:36 PM | A+A A-

ರಣದೀಪ್
ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರು. ಇದರಂತೆ ಬಿಬಿಎಂಪಿಯ ಘನ ತ್ಯಾಜ್ಯ ನಿರ್ವಹಣೆಯ ವಿಶೇಷ ಆಯುಕ್ತರಾಗಿದ್ದ ರಣದೀಪ್.ಡಿ ಅವರನ್ನು ಬಿಬಿಎಂಪಿ ಆರೋಗ್ಯ ಮತ್ತು ಮಾಹಿತಿ ತಂತ್ರಜ್ಞಾನದ ವಿಶೇಷ ಆಯುಕ್ತರಾಗಿ ನೇಮಕ ಮಾಡಲಾಗಿದೆ.
ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರಾಗಿದ್ದ ಕೆ.ಹರೀಶ್ ಕುಮಾರ್ ಅವರನ್ನು ಬಿಬಿಎಂಪಿಯ ಘನ ತ್ಯಾಜ್ಯ ನಿರ್ವಹಣೆಯ ವಿಶೇಷ ಆಯುಕ್ತರಾಗಿ ವರ್ಗಾಯಿಸಿ ಆದೇಶ ಹೊರಡಿಸಿದೆ.
ಇದರಂತೆ ನಿನ್ನೆ ಅಧಿಕಾರವಹಿಸಿಕೊಂಡ ರಣದೀಪ್ ಅವರು, ಸೋಂಕು ಪ್ರಕರಣಗಳ ಕಡಿಮೆ ಮಾಡಲು ಲಸಿಕೆ ಮತ್ತು ಪರೀಕ್ಷೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಕಂಟೈನ್‌ಮೆಂಟ್ ವಲಯಗಳನ್ನು ಜಾರಿಗೊಳಿಸಲು ಹೆಚ್ಚಿನ ಕೆಲಸ ಮಾಡಲಾಗುವುದು ಮತ್ತು ಜನರು ಕೋವಿಡ್ ನಿಯಂತ್ರಿಸಲು ಮಾರ್ಗಸೂಚಿಗಳು ಪಾಲನೆ ಕಡ್ಡಾಯವಾಗಿದ್ದು, ಜನರ ನಡವಳಿಕೆಗಳನ್ನು ಖಚಿತಪಡಿಸಿಕೊಳ್ಳಲು ಮಾರ್ಷಲ್‌ಗಳನ್ನು ನಿಯೋಜಿಸಲಾಗುತ್ತದೆ ಎಂದು ರಣದೀಪ್ ಅವರು ಹೇಳಿದ್ದಾರೆ.