ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ 2 ತಿಂಗಳ ಕಾಲಾವಕಾಶ: ಪ್ರಭು ಚವ್ಹಾಣ್

ಕೋವಿಡ್ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪಶುಸಂಗೋಪನೆ ಇಲಾಖೆಯ ಪಶುವೈದ್ಯಕೀಯ ಸಹಾಯಕ ಮತ್ತು ಪರೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಇನ್ನೂ 2 ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್  ತಿಳಿಸಿದ್ದಾರೆ.
ಪ್ರಭು ಚವ್ಹಾಣ್
ಪ್ರಭು ಚವ್ಹಾಣ್

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪಶು ಸಂಗೋಪನೆ ಇಲಾಖೆಯ ಪಶುವೈದ್ಯಕೀಯ ಸಹಾಯಕ ಮತ್ತು ಪರೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಇನ್ನೂ 2 ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್  ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಅನೇಕ ಅಭ್ಯರ್ಥಿಗಳಿಗೆ ಪಶುವೈದ್ಯಕೀಯ ಸಹಾಯಕ ಮತ್ತು ಪಶು ವೈದ್ಯಕೀಯ ಪರೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ತೊಂದರೆ ಆಗಿರುವ ಕುರಿತು ಕಲ್ಯಾಣ ಕರ್ನಾಟಕ ಭಾಗದ ಅನೇಕ ಉದ್ಯೋಗಾಕಾಂಕ್ಷಿಗಳು ಕರೆ ಮಾಡಿ ತಮ್ಮ ಅಸಾಹಾಯಕತೆಯನ್ನು ತೋಡಿಕೊಂಡಿದ್ದರು. ಈ ಕುರಿತಾಗಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅರ್ಜಿ ಸಲ್ಲಿಸಲು 2 ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದರು.

ಪಶು ವೈದ್ಯಕೀಯ ಸಹಾಯಕ 83 ಹುದ್ದೆಗಳು ಮತ್ತು ಪಶುವೈದ್ಯಕೀಯ ಪರೀಕ್ಷಕ 32 ಹುದ್ದೆಗಳಿಗೆ ಜೂ.16 ರಿಂದ ಆ. 18ರ ವರೆಗೆ ಕಾಲಾವಕಾಶ ನೀಡಲಾಗಿದೆ. ಒಟ್ಟು 115 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com