ಲಾಕ್ಡೌನ್ ನಿಯಮ ಉಲ್ಲಂಘನೆ: ಬೆಂಗಳೂರು ಪೊಲೀಸರಿಂದ 3 ದಿನದಲ್ಲಿ 10 ಲಕ್ಷ ರೂ. ದಂಡ ಸಂಗ್ರಹ!

ನಗರದಲ್ಲಿ ಅನ್'ಲಾಕ್ ಪ್ರಕ್ರಿಯೆ ಹಂತ ಹಂತವಾಗಿ ಆರಂಭವಾಗುತ್ತಿದ್ದು, ಈ ನಡುವಲ್ಲೇ ನಗರ ಪೊಲೀಸರು ಲಾಕ್ಡೌನ್ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಇದರಂತೆ ಕೇವಲ ಮೂರು ದಿನಗಳಲ್ಲಿ 10 ಲಕ್ಷ ದಂಡವನ್ನು ವಸೂಲಿ ಮಾಡಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಗರದಲ್ಲಿ ಅನ್'ಲಾಕ್ ಪ್ರಕ್ರಿಯೆ ಹಂತ ಹಂತವಾಗಿ ಆರಂಭವಾಗುತ್ತಿದ್ದು, ಈ ನಡುವಲ್ಲೇ ನಗರ ಪೊಲೀಸರು ಲಾಕ್ಡೌನ್ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಇದರಂತೆ ಕೇವಲ ಮೂರು ದಿನಗಳಲ್ಲಿ 10 ಲಕ್ಷ ದಂಡವನ್ನು ವಸೂಲಿ ಮಾಡಿದ್ದಾರೆ. 

ಲಾಕ್ಡೌನ್ ನಿಯಮ ಉಲ್ಲಂಘಿಸಿದವರ ವಾಹನಗಳ ಫೋಟೋಗಳನ್ನು ಸಂಗ್ರಹಿಸಿದ್ದ ಪೊಲೀಸರು ಇದೀಗ ನೋಟಿಸ್ ಗಳನ್ನು ಜಾರಿ ಮಾಡಿ, ದಂಡ ಕಟ್ಟುವಂತೆ ಸೂಚಿಸುತ್ತಿದ್ದಾರೆ. ಇದರಂತೆ ಕೇವಲ ಮೂರು ದಿನಗಳಲ್ಲೇ ರೂ.10,24,750 ದಂಡ ವಸೂಲಿ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

ಸಂಗ್ರಹಿಸಲಾಗಿರುವ ಈ ಹಣವು ರಾಜ್ಯ ಬೊಕ್ಕಸಕ್ಕೆ ಹೋಗಲಿದ್ದು ರಾಜ್ಯದ ಆರ್ಥಿಕತೆ ಪರಿಸ್ಥಿತಿ ಸುಧಾರಿಸಲು ಇದು ಸಹಾಯ ಮಾಡಲಿದೆ. ಲಾಕ್ಡೌನ್ ವೇಳೆ ಸಾಕಷ್ಟು ಜನರಿಗೆ ಎಚ್ಚರಿಕೆ ನೀಡಿ ಬಿಡಲಾಗಿತ್ತು. ಹೀಗಾಗಿ ದಂಡದ ಹಣ ಕಡಿಮೆಯಾಗಿದೆ. ಆದರೆ, ನಿಯಮ ಉಲ್ಲಂಘಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಮುಂದಿನ ದಿನಗಳಲ್ಲಿ ದಂಡದ ಮೊತ್ತವನ್ನು ಏರಿಕೆ ಮಾಡುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ. 

ಪರಿಸ್ಥಿತಿ ಅರ್ಥಮಾಡಿಕೊಳ್ಳುವಂತೆ ಜನರಿಗೆ ಸಾಕಷ್ಟು ಸಮಯವನ್ನು ನೀಡಲಾಗಿದೆ ಎಂದು ಇಲಾಖೆ ನಿರ್ಧರಿಸಿದೆ. ಹೀಗಾಗಿ ಇನ್ನು ಮುಂದೆ ಯಾರಿಗೂ ಮೃದುತ್ವ ತೋರದಿರಲು ನಿರ್ಧರಿಸಿದ್ದು, ಮಾರ್ಗಸೂಚಿ ಪಾಲನೆ ಮಾಡದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

ಕಳೆದ ಮೂರು ದಿನಗಳಲ್ಲಿ 5,312 ಪ್ರಕರಣಗಳನ್ನು ದಾಖಲಿಸಿಕೊಳ್ಳಳಾಗಿದ್ದು, ಇದರಲ್ಲಿ 20 ಪ್ರಕರಣಗಳು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ (ಎನ್'ಡಿಎಂಎ) ಅಡಿಯಲ್ಲಿ ದಾಖಲಾಗಿದೆ. 3818 ಪ್ರಕರಣಗಳು ಮಾಸ್ಕ್ ಧರಿಸದೇ ಇರುವುದು, 1,494 ಪ್ರಕರಣಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು ದಾಖಲಾಗಿದೆ. 

ವಾಣಿಜ್ಯ ಕಟ್ಟಡಗಳ ವಿರುದ್ಧ ಎನ್'ಡಿಎಂಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅನ್'ಲಾಕ್ ಮೊದಲ ಹಂತದಲ್ಲಿ ಪಟ್ಟಿಯಲ್ಲಿರದಿದ್ದರೂ ಅಂಗಡಿಗಳನ್ನು ತೆರೆದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದೊಡ್ಡ ದೊಡ್ಡ ವಾಣಿಜ್ಯ ಕಟ್ಟಡಗಳು, ರೆಸ್ಟೋರೆಂಟ್ ಗಳ ವಿರುದ್ಧ ಈ ಪ್ರಕರಣ ದಾಖಲಾಗಿದೆ. ಶೀಘ್ರದಲ್ಲೇ ಇವುಗಳಿಗೆ ನೋಟಿಸ್ ಜಾರಿ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಲಾಕ್ಡೌನ್ ಸಮಯದಲ್ಲೂ ಕೆಲವರು ರಸ್ತೆಗಳಲ್ಲಿ ಅಡ್ಡಾಡುತ್ತಿರುವುದು ಕಂಡು ಬಂದಿತ್ತು. ಹೆಲ್ಮೆಟ್ ಧರಿಸದಿರುವುದು, ಸೀಟ್ ಬೆಲ್ಟ್ ಧರಿಸದಿರುವವರ ವಿರುದ್ಧವೂ ಪ್ರಕರಣ ಈ ಅವಧಿಯಲ್ಲಿ ಪ್ರಕರಣ ದಾಖಲಿಸಿಕೊಂಡಿಲ್ಲ. ಇವುಗಳನ್ನೂ ಸೇರ್ಪಡೆಗೊಳಿಸಿದ್ದೇ ಆದರೆ, ಪಟ್ಟಿ ದೊಡ್ಡದಾಗಿ ಹೋಗುತ್ತದೆ. ಕಳೆದ ವರ್ಷ ಪೊಲೀಸರು ಅಮಾನವೀಯವಾಗಿ ವರ್ತಿಸುತ್ತಿದ್ದಾರೆಂಬ ಆರೋಪಗಳು ಕೇಳಿ ಬಂದಿತ್ತು. ಹೀಗಾಗಿ ಈ ಬಾರಿ ಸಾಕಷ್ಟು ಜನರಿಗೆ ಎಚ್ಚರಿಕೆಗಳನ್ನು ನೀಡಲಾಗಿತ್ತು. ಆದರೆ, ನಿಯಮ ಉಲ್ಲಂಘಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಇಲಾಖೆ ನಿರ್ಧರಿಸಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com