ಬ್ಲ್ಯಾಕ್ ಫಂಗಸ್ ಗೆ ಉಚಿತ ಚಿಕಿತ್ಸೆ ನೀಡುವ ಕುರಿತು ನಿರ್ಧಾರ ಕೈಗೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಹೆಚ್ಚಳ ಆಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಈ ರೋಗದ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವ ಕುರಿತು ನಿರ್ಧಾರ ಕೈಗೊಳ್ಳುವಲಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಹೆಚ್ಚಳ ಆಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಈ ರೋಗದ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವ ಕುರಿತು ನಿರ್ಧಾರ ಕೈಗೊಳ್ಳುವಲಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಕೋವಿಡ್ ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಸೂಚನೆ ನೀಡಿದೆ. 

ರಾಜ್ಯದಲ್ಲಿ ಒಟ್ಟು 2,817 ಬ್ಲ್ಯಾಕ್ ಫಂಗಸ್ ಕೇಸ್‍ಗಳು ಪತ್ತೆಯಾಗಿದ್ದು, ಸಾವಿನ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಹೀಗಾಗಿ, ಫಂಗಸ್ ಚಿಕಿತ್ಸೆಗೆ ಬೆಡ್ ಮೀಸಲಿಡಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಬೇಕು ಎಂದು ನ್ಯಾಯಪೀಠವು ಸರ್ಕಾರಕ್ಕೆ ಸೂಚನೆ ನೀಡಿದೆ.

ರೋಗವನ್ನು ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಕ್ರಮ ಕೈಗೊಳ್ಳಬೇಕು. ಕೋವಿಡ್ ಪಾಸಿಟಿವ್ ಬಂದವರಿಗೆ ಈ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸಬೇಕು ಹಾಗೂ ಈ ಬಗ್ಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮುಂದಿನ ವಿಚಾರಣೆ ವೇಳೆ ಹೈಕೋರ್ಟ್‍ಗೆ ಮಾಹಿತಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com