ಬೆಂಗಳೂರು ಆಸ್ಪತ್ರೆ ಸಿಬ್ಬಂದಿ ಮೇಲೆ ಮೃತ ರೋಗಿಯ ಸಂಬಂಧಿಗಳಿಂದ ಹಲ್ಲೆ: ಕೇಸ್ ದಾಖಲು

ಮಣಿಪಾಲ್ ಆಸ್ಪತ್ರೆಯ ತುರ್ತು ಘಟಕದಲ್ಲಿ ಸೋಮವಾರ ಮೃತ ವ್ಯಕ್ತಿಯ ಸಂಬಂಧಿಕರ ಗುಂಪೊಂದು ಕರ್ತವ್ಯ ನಿರತ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮಣಿಪಾಲ್ ಆಸ್ಪತ್ರೆಯ ತುರ್ತು ಘಟಕದಲ್ಲಿ ಸೋಮವಾರ ಮೃತ ವ್ಯಕ್ತಿಯ ಸಂಬಂಧಿಕರ ಗುಂಪೊಂದು ಕರ್ತವ್ಯ ನಿರತ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. 

ಈ ಸಂಬಂಧ ಜೀವನ್ ಬೀಮಾ ನಗರ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಆಸ್ಪತ್ರೆಯ ಚೀಫ್ ಸೆಕ್ಯೂರಿಟಿ ಆಫೀಸರ್  ತಿಮ್ಮಯ್ಯ ಎಂಬುವರು ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃಷ್ಣ ಮತ್ತಿತತರರ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಳ್ಳಲಾಗಿದೆ. ಆರೋಪಿ ಕೃಷ್ಣ ಎಂಬಾತ ವೈಟ್ ಫೀಲ್ಡ್ ನಿವಾಸಿಯಾಗಿದ್ದ ತನ್ನ ಸಂಬಂಧಿ ಆಶಾ ಎಂಬುವರು ನೇಣು ಬಿಗಿದ ಸ್ಥಿತಿಯಲ್ಲಿದ್ದರು. ಅವರನ್ನು ದಾಖಲಿಸಲು ಖಾಸಗಿ ಆಸ್ಪತ್ರೆಗೆ ಕರೆ ತಂದಿದ್ದರು, ಆದರೆ ದಾಖಲಿಸಿಕೊಳ್ಳಲು ಆಸ್ಪತ್ರೆ ಸಿಬ್ಬಂದಿ ನಿರಾಕರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅದಾದ ನಂತರ ಕೃಷ್ಣ ಆಕೆಯನ್ನು ಮಣಿಪಾಲ್ ಆಸ್ಪತ್ರೆಗೆ ಕರೆ ತಂದಿದ್ದಾನೆ. ತುರ್ತು ನಿಗಾದಲ್ಲಿದ್ದ ವೈದ್ಯರು ಆಕೆಯನ್ನು ಪರೀಕ್ಷಿಸಿ ಸತ್ತಿರುವುದಾಗಿ ತಿಳಿಸಿದ್ದಾರೆ. ಇದರಿಂದ ಕೋಪಗೊಂಡ ಕೃಷ್ಣ ಮತ್ತು ಆತನ ಸಂಬಂಧಿಕರು ಆಸ್ಪತ್ರೆ  ಸಿಬ್ಬಂದಿಯನ್ನು ನಿಂದಿಸಿ ದಾಂಧಲೆ ಮಾಡಿದ್ದಾರೆ. ಕೂಡಲೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಈ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ, ಮೃತಳ ಅಂತ್ಯಕ್ರಿಯೆ ಇನ್ನೂ ನಡೆದಿಲ್ಲ, ಆದರೆ ಪೊಲೀಸರು ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಕರ್ತವ್ಯ ವೈದ್ಯರ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ನಾಲ್ಕು ದಿನಗಳ ಹಿಂದೆ ಪುಟ್ಟೇನಹಳ್ಳಿಯ 29 ವರ್ಷದ ಜಗದೀಶ್ ಎಂಬ ಖಾಸಗಿ ಕಂಪನಿಯ ಉದ್ಯೋಗಿಯನ್ನು ಬಂಧಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com