ಲಾಕ್ಡೌನ್ ನಿಯಮ ಉಲ್ಲಂಘನೆ ಆರೋಪ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ನೃಪತುಂಗ ರಸ್ತೆಯಲ್ಲಿರುವ ಹೋಟೆಲ್ ವೊಂದರಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ನಗರದಲ್ಲಿ ದೂರು ದಾಖಲಾಗಿದೆ.
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ

ಬೆಂಗಳೂರು: ನೃಪತುಂಗ ರಸ್ತೆಯಲ್ಲಿರುವ ಹೋಟೆಲ್ ವೊಂದರಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ನಗರದಲ್ಲಿ ದೂರು ದಾಖಲಾಗಿದೆ. 

ಆರ್'ಟಿಐ ಕಾರ್ಯಕರ್ತ ವಿಜಯ್ ಡೇನ್ನಿಸ್ ಅವರು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ತೇಜಸ್ವಿ ಸೂರ್ಯ ಅವರ ವಿರುದ್ಧ ದೂರು ದಾಖಲಿಸಿದ್ದಾರೆಂದು ತಿಳಿದುಬಂದಿದೆ. 

ಕೊರೋನಾ ಸೋಂಕು ನಿಯಂತ್ರಿಸಲುವ ಸಲುವಾಗಿ ಲಾಕ್ಡೌನ್ ಹೇರಿರುವ ರಾಜ್ಯ ಸರ್ಕಾರ ಹೋಟೆಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್'ಗೆ ಮಾತ್ರ ಅವಕಾಶ ನೀಡಿದೆ. ಆದರೆ, ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಹೋಟೆಲ್ ನಲ್ಲಿ ತೇಜಸ್ವಿ ಸೂರ್ಯ ಹಾಗೂ ಗಾಯಕ ವಿಜಯ್ ಪ್ರಕಾಶ್ ಅವರು ಊಟ ಮಾಡಿದ್ದಾರೆ. ಇದು ಲಾಕ್ಡೌನ್ ನಿಯಮ ಉಲ್ಲಂಘನೆ ಮಾಡಿದಂತಾಗಿದೆ. ಹೀಗಾಗಿ ಅವರ ವಿರುದ್ಧ ಎನ್'ಡಿಎಂಸಿ ಹಾಗೂ ಐಪಿಸಿ ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com