ವಿಧಾನಸೌಧ
ವಿಧಾನಸೌಧ

ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವ ಕುರಿತು ಸುತ್ತೋಲೆ

ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಇಂದು ಸುತ್ತೋಲೆ ಹೊರಡಿಸಿದ್ದಾರೆ.

ಬೆಂಗಳೂರು: ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಇಂದು ಸುತ್ತೋಲೆ ಹೊರಡಿಸಿದ್ದಾರೆ.

ಹಾಜರಾತಿಯಿಂದ ವಿನಾಯಿತಿ ನೀಡಲ್ಪಟ್ಟ ಗ್ರೂಪ್ ಬಿ, ಸಿ ಮತ್ತು ಡಿ ವೃಂದದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿ ಲಭ್ಯವಿರುವುದು ಹಾಗೂ ಕೋವಿಡ್-19 ಕರ್ತವ್ಯಕ್ಕಾಗಿ ಯೋಜಿಸಿದ್ದಲ್ಲಿ ತಪ್ಪದೇ ಹಾಜರಾಗಿ ಕರ್ತವ್ಯ ನಿರ್ವಹಿಸತಕ್ಕದ್ದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.

ದೃಷ್ಟಿಹೀನ ಹಾಗೂ ಇತರೆ ದೈಹಿಕ ಅಂಗವೈಕಲ್ಯ ಹೊಂದಿರುವ ಅಧಿಕಾರಿ, ಸಿಬ್ಬಂದಿ ಮತ್ತು ಗರ್ಭಿಣಿ ಮಹಿಳಾ ಸಿಬ್ಬಂದಿ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ. ಈ ಸುತ್ತೋಲೆ ಈ ತಿಂಗಳವರೆಗೂ ಅಸ್ತಿತ್ವದಲ್ಲಿರುತ್ತದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com