ರಾಜ್ಯದಲ್ಲಿ 2 ತಿಂಗಳು ಪ್ರತಿ ವಿದ್ಯಾರ್ಥಿಗೂ ಕೆನೆಭರಿತ ಹಾಲಿನ ಪುಡಿ ವಿತರಣೆ!

ಪ್ರಸಕ್ತ ಸಾಲಿನ ಜೂನ್‌ ಮತ್ತು ಜುಲೈ ತಿಂಗಳಲ್ಲಿ (ಎರಡು ತಿಂಗಳು) ಪ್ರತಿ ಶಾಲಾ ವಿದ್ಯಾರ್ಥಿಗೆ ಆಹಾರಧಾನ್ಯದ ಜೊತೆಗೆ ತಲಾ ಅರ್ಧ ಕಿಲೋ ಕೆನೆಭರಿತ ಹಾಲಿನ ಪುಡಿ ವಿತರಿಸಲು ಶಿಕ್ಷಣ ಇಲಾಖೆಯು 163.71 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿದೆ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

Published: 19th June 2021 07:54 AM  |   Last Updated: 19th June 2021 01:04 PM   |  A+A-


suresh kumar

ಸಚಿವ ಸುರೇಶ್ ಕುಮಾರ್

Posted By : Manjula VN
Source : The New Indian Express

ಬೆಂಗಳೂರು: ಪ್ರಸಕ್ತ ಸಾಲಿನ ಜೂನ್‌ ಮತ್ತು ಜುಲೈ ತಿಂಗಳಲ್ಲಿ (ಎರಡು ತಿಂಗಳು) ಪ್ರತಿ ಶಾಲಾ ವಿದ್ಯಾರ್ಥಿಗೆ ಆಹಾರಧಾನ್ಯದ ಜೊತೆಗೆ ತಲಾ ಅರ್ಧ ಕಿಲೋ ಕೆನೆಭರಿತ ಹಾಲಿನ ಪುಡಿ ವಿತರಿಸಲು ಶಿಕ್ಷಣ ಇಲಾಖೆಯು 163.71 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿದೆ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

ಶಾಲೆಗಳು ಭೌತಿಕವಾಗಿ ನಡೆಯದೇ ಇದ್ದರೂ ಮಧ್ಯಾಹ್ನ ಉಪಹಾರದ ಆಹಾರ ಧಾನ್ಯಗಳು, ಅಡುಗೆ ಎಣ್ಣೆ ಸೇರಿದಂತೆ ಪೂರಕ ಸಾಮಗ್ರಿಗಳನ್ನು ನಿರಂತರವಾಗಿ ತಲುಪಿಸುವ ವ್ಯವಸ್ಥೆ ಮಾಡುತ್ತಿದ್ದೇವೆ. ಇಂತಹ ಸಂಕಷ್ಟದ ಸಮಯದಲ್ಲಿ ನಮ್ಮ ಸರಕಾರಿ ಶಾಲಾ ಮಕ್ಕಳಿಗೆ ಪೌಷ್ಟಿಕಾಂಶದ ಆಹಾರ ದೊರಕಬೇಕು ಎನ್ನುವ ಸದುದ್ದೇಶದಿಂದ ಈಗ ಜೂನ್ ಹಾಗೂ ಜುಲೈ ತಿಂಗಳುಗಳಿಗೆ ಸಂಬಂಧಿಸಿದಂತೆ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ಅರ್ಧ ಕಿಲೋಗ್ರಾಂ ಕೆನೆಭರಿತ ಹಾಲಿನ ಪುಡಿಯನ್ನು ಒದಗಿಸಲು ಆಲೋಚಿಸಿದ್ದೇವೆ. ಆ ಮೂಲಕ ನಮ್ಮ ವಿದ್ಯಾರ್ಥಿಗಳ ಆರೋಗ್ಯಕ್ಕೆ ಪರಿಪೂರ್ಣ ಬೆಂಬಲವನ್ನು ದೊರಕಿಸುವ, ಅವರ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶ ಸರಕಾರದ್ದಾಗಿದೆ ಎಂದು ಹೇಳಿದ್ದಾರೆ.

ಸರ್ಕಾರ ಈ ನಿರ್ಧಾರವು ನಮ್ಮ ಮಕ್ಕಳ ಪೌಷ್ಟಿಕತೆಗೆ ಪೂರಕವಾಗುವುದಷ್ಟೇ ಅಲ್ಲ, ಸಂಕಷ್ಟದಲ್ಲಿರುವ ಗ್ರಾಮೀಣ ಹಾಲು ಉತ್ಪಾದಕರ, ರೈತರ ಆರ್ಥಿಕ ಮಟ್ಟ ಸುಧಾರಿಸಲು ನೆರವಾಗಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಈ ಹಾಲಿನ ಪುಡಿಯ ಪ್ಯಾಕೆಟ್ ವಿತರಣಾ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸುವ ಜವಾಬ್ದಾರಿ ನಿಗದಿ ಪಡಿಸಲಾಗಿದೆ. ತಮ್ಮ ಇಲಾಖೆಯು ಸಲ್ಲಿಸಿದ ಪ್ರಸ್ತಾವನೆಗೆ ಅತಿ ಶೀಘ್ರದಲ್ಲಿ ಅನುಮೋದನೆ ನೀಡಿದ ಮುಖ್ಯಮಂತ್ರಿಗೆ ಧನ್ಯವಾದಗಳು ಎಂದು ಸುರೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Stay up to date on all the latest ರಾಜ್ಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp