ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕನ್ನಡ ಭಾಷೆಗೆ ಕೂಡ ಆದ್ಯತೆ ಕೊಡಿ: ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ
ರಾಷ್ಟ್ರೀಯ ಶಿಕ್ಷಣ ನೀತಿ ಹೆಸರಿನಲ್ಲಿ ಕನ್ನಡದ ಕುತ್ತಿಗೆಯನ್ನು ಹಿಸುಕುವ ಕೆಲಸಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
Published: 19th June 2021 11:28 AM | Last Updated: 19th June 2021 11:28 AM | A+A A-

ಸಿದ್ದರಾಮಯ್ಯ
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಹೆಸರಿನಲ್ಲಿ ಕನ್ನಡದ ಕುತ್ತಿಗೆಯನ್ನು ಹಿಸುಕುವ ಕೆಲಸಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಹೊಸ ಪಠ್ಯಕ್ರಮವನ್ನು ರೂಪಿಸುವಾಗ ಸಂಬಂಧಿಸಿದ ತಜ್ಞರುಗಳ ಜೊತೆ ಚರ್ಚಿಸಿ ಆರೋಗ್ಯಕರವಾದ ನಿರ್ಧಾರವನ್ನು ತೆಗೆದುಕೊಳ್ಳುವ ಜೊತೆಗೆ ನಾಡು-ನುಡಿಯನ್ನು ಕಟ್ಟಲು ಪೂರಕವಾಗುವ ಪಠ್ಯಗಳನ್ನು ರೂಪಿಸಬೇಕಾಗಿದೆ. ಇದರ ಮಧ್ಯೆ ಕನ್ನಡ ನಾಡು-ನುಡಿಗೆ ದ್ರೋಹ ಎಸಗುವ ಕೆಲಸವನ್ನು ಸರ್ಕಾರ ಮಾಡಿದರೆ ತೀವ್ರ ಸ್ವರೂಪದ ಪ್ರತಿಭಟನೆಯನ್ನು ನಾವು ಮಾಡುತ್ತೇವೆ ಎಂದಿದ್ದಾರೆ.
ಮಕ್ಕಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ರೂಪಿಸಬೇಕು ಎಂದು ಅವರು ಹೇಳಿದ್ದಾರೆ.ಕನಿಷ್ಠ ಆರು ಸೆಮಿಸ್ಟರುಗಳಲ್ಲಿ ಕನ್ನಡ ಭಾಷಾ ವಿಷಯವನ್ನು ಎಲ್ಲಾ ಪದವಿ ಮಕ್ಕಳಿಗೂ ಕಡ್ಡಾಯವಾಗಿ ಕಲಿಸಲೇಬೇಕೆಂದು ರಾಜ್ಯ ಸರ್ಕಾರವನ್ನು ಅವರು ಒತ್ತಾಯಿಸಿದ್ದಾರೆ.
ಮಕ್ಕಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ರೂಪಿಸಬೇಕಾಗಿದೆ. ಹಾಗಾಗಿ ಹೊಸ ಪಠ್ಯಕ್ರಮವನ್ನು ರೂಪಿಸುವಾಗ ಸಂಬಂಧಿಸಿದ ತಜ್ಞರುಗಳ ಜೊತೆ ಚರ್ಚಿಸಿ ಆರೋಗ್ಯಕರವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಜೊತೆಗೆ ನಾಡು-ನುಡಿಯನ್ನು ಕಟ್ಟಲು ಪೂರಕವಾಗುವ ಪಠ್ಯಗಳನ್ನು ರೂಪಿಸಬೇಕು. 14/15#ಕನ್ನಡ
— Siddaramaiah (@siddaramaiah) June 18, 2021