ಸೈಬರ್ ವಂಚಕರ ವಿರುದ್ಧ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ದೂರು ದಾಖಲು!

ಕ್ರೆಡಿಟ್ ಕಾರ್ಡ್​ನಲ್ಲಿ ಗಳಿಸಿಕೊಂಡಿರುವ ಪಾಯಿಂಟ್ ಮುಕ್ತಾಯವಾಗಲಿದೆ ಎಂದು ಕರೆ ಮಾಡಿ ವಂಚಿಸಲು ಯತ್ನಿಸಿದ್ದಾರೆ

Published: 19th June 2021 01:02 AM  |   Last Updated: 19th June 2021 12:55 PM   |  A+A-


Sathosh_hegde1

ಸಂತೋಷ್ ಹೆಗ್ಡೆ

Posted By : Srinivas Rao BV
Source : UNI

ಬೆಂಗಳೂರು: ಕ್ರೆಡಿಟ್ ಕಾರ್ಡ್​ನಲ್ಲಿ ಗಳಿಸಿಕೊಂಡಿರುವ ಪಾಯಿಂಟ್ ಮುಕ್ತಾಯವಾಗಲಿದೆ ಎಂದು ಕರೆ ಮಾಡಿ ವಂಚಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಸೈಬರ್ ಖದೀಮರ ವಿರುದ್ಧ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ನಗರ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಜೂ. 14ರಂದು ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿದ ಮಹಿಳೆಯೊಬ್ಬಳು, ಸಿಟಿ ಬ್ಯಾಂಕ್ ಮಾಸ್ಟರ್ ಕ್ರೆಡಿಟ್ ಕಾರ್ಡ್​ನಲ್ಲಿ ಗಳಿಸಿಕೊಂಡಿರುವ ಪಾಯಿಂಟ್ ಮುಕ್ತಾಯವಾಗಲಿದೆ ಎಂದು ತಿಳಿಸಿದ್ದಾಳೆ. ಇದರಿಂದ ಸಂಶಯಗೊಂಡ ಸಂತೋಷ್ ಹೆಗ್ಡೆ ಅವರು ತಕ್ಷಣವೇ ಕರೆ ಸ್ಥಗಿತಗೊಳಿಸಿದ್ದಾರೆ. ನಂತರ ಓಟಿಪಿ ಕಳುಹಿಸುವಂತೆ ಮೇಸೆಜ್ ಮಾಡಿದ್ದಾಳೆ. ಮೋಸ ಮಾಡುವ ದುರುದ್ದೇಶದಿಂದ ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿ ವಂಚಿಸಲು ಪ್ರಯತ್ನಿಸಿದ್ದಾಳೆ ಎಂದು ದೂರಿನಲ್ಲಿ ಸಂತೋಷ್ ಹೆಗ್ಡೆ ಉಲ್ಲೇಖಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸೆಂಟ್ರಲ್ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.


Stay up to date on all the latest ರಾಜ್ಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp