ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಭ್ರಷ್ಚಾಚಾರ: ಎಂಎಲ್ ಸಿ ಹೆಚ್.ವಿಶ್ವನಾಥ್ ಆರೋಪ ನಿರಾಕರಿಸಿದ ರಾಜ್ಯ ಸರ್ಕಾರ

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ರೂ.20 ಸಾವಿರ ಕೋಟಿ ಅವ್ಯವಹಾರ ನಡೆದಿದೆ ಎಂಬ ಬಿಜೆಪಿ ಎಂಎಲ್'ಸಿ ಹೆಚ್.ವಿಶ್ವನಾಥ್ ಅವರ ಆರೋಪ ಆಧಾರರಹಿತವಾದದ್ದು ಎಂದು ರಾಜ್ಯ ಸರ್ಕಾರ ಹೇಳಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ರೂ.20 ಸಾವಿರ ಕೋಟಿ ಅವ್ಯವಹಾರ ನಡೆದಿದೆ ಎಂಬ ಬಿಜೆಪಿ ಎಂಎಲ್'ಸಿ ಹೆಚ್.ವಿಶ್ವನಾಥ್ ಅವರ ಆರೋಪ ಆಧಾರರಹಿತವಾದದ್ದು ಎಂದು ರಾಜ್ಯ ಸರ್ಕಾರ ಹೇಳಿದೆ. 

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯ ಜಲ ಸಂಪನ್ಮೂಲ ಇಲಾಖೆಯು, ರಾಜ್ಯದ ಜಲಸಂಪನ್ಮೂಲ ಇಲಾಖೆಯಲ್ಲಿನ ಎಲ್ಲಾ ಟೆಂಡರ್ ಪ್ರಕ್ರಿಯೆಗಳನ್ನು ಅತ್ಯಂತ ಪಾರದರ್ಶಕ ರೀತಿಯಲ್ಲಿ ನಡೆಸಲಾಗಿದೆ. ಯಾವುದೇ ಅಕ್ರಮಗಳೂ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ. 

ಶಾಸಕ ಹೆಚ್.ವಿಶ್ವನಾಥ್ ಅವರ ಆರೋಪಗಳಿಗೆ ಸಂಬಂಧಿಸಿದಂತೆ ಶುಕ್ರವಾರ ಸುದೀರ್ಘ ಸ್ಪಷ್ಟನೆ ನೀಡಿರುವ ಇಲಾಖೆಯ ಕಾರ್ಯದರ್ಶಿ ಲಕ್ಷ್ಮಣ್ ರಾವ್ ಪೇಶ್ವೆ ಅವರು, ಭದ್ರಾ ಮೇಲ್ದಂಡೆ ಮತ್ತು ಕಾವೇರಿ ನೀರಾವರಿ ಯೋಜನೆಗಳಿಗೆ ಆರ್ಥಿಕ ಇಲಾಖೆ ಸಹಮತಿ ಹಾಗೂ ಸಮ್ಮತಿ ಇಲ್ಲದೆಯೇ ರೂ. 20 ಸಾವಿರ ಕೋಟಿ ಟೆಂಡರ್ ಆಹ್ವಾನಿಸಲಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ರೂ.21,473.67 ಕೋಟಿ ಮೊತ್ತದ ಸಮಗ್ರ ಪರಿಷ್ಕೃತ ಯೋಜನಾ ವರದಿಯ ಶಿಫಾರಸ್ಸಿನ ಅನ್ವಯ ಸರ್ಕಾರವು ದಿನಾಂಕ ಕಳೆದ 2020ರ ಡಿ.16 ರಂದು ಆರ್ಥಿಕ ಇಲಾಖೆ ಸಹಮತಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ. 

ಬಳಿಕ ಡಿ.24 ರಂದು ನಡೆದ ಕೇಂದ್ರ ಜಲಶಕ್ತಿ ಮಂತ್ರಾಲಯದ ತಾಂತ್ರಿಕ ಸಲಹಾ ಸಮಿತಿಯಲ್ಲಿ ಈ ಯೋಜನೆಗೆ 16,125.48 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 

ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಪ್ರಸ್ತಾಪನೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಕಳೆದ ಮಾ.25ರ ಸಭೆಯಲ್ಲಿ ಈ ಕಡತವನ್ನು ಕೇಂದ್ರದ ಹೂಡಿಕೆ ತೀರುವಳಿ ಮಂಡಳಿಗೆ ನೀಡಲಾಗಿದೆ. ಪ್ರಸ್ತುತ ಉನ್ನತಾಧಿಕಾರ ಸಮಿತಿಯ ಮುಂದೆ ತಿರುವಳಿಗಾಗಿ ಪ್ರಸ್ತಾಪವನೆ ಸಲ್ಲಿಕೆ ಹಂತದಲ್ಲಿ ಇದೆ ಎಂದು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com