ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆ ಶೀಘ್ರವೇ ಆರಂಭ: ಸಿಎಂ ಯಡಿಯೂರಪ್ಪ

ಕೇಂದ್ರ ಸರ್ಕಾರದ ಅನುಮತಿ ಪಡೆದು ರಾಜ್ಯದ ಮಹತ್ವಪೂರ್ಣವಾಗಿರುವ ಮೇಕೆದಾಟು ಯೋಜನೆಯನ್ನು ಶೀಘ್ರವೇ ಆರಂಭಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ,
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಕೇಂದ್ರ ಸರ್ಕಾರದ ಅನುಮತಿ ಪಡೆದು ರಾಜ್ಯದ ಮಹತ್ವಪೂರ್ಣವಾಗಿರುವ ಮೇಕೆದಾಟು ಯೋಜನೆಯನ್ನು ಶೀಘ್ರವೇ ಆರಂಭಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ,

ಪ್ರಮುಖವಾಗಿ ಕುಡಿಯುವ ನೀರಿಗೆ ಅನುಕೂಲ ಕಲ್ಪಿಸುವಂಥದ್ದು. ಈ ಯೋಜನೆಗೆ ತಡೆ ಕೋರುವ ಅರ್ಜಿಯ ವಿಚಾರಣೆ ನಡೆಸಿದ ಎನ್.ಜಿ.ಟಿ ರಾಜ್ಯದ ವಾದವನ್ನು ಮನ್ನಿಸಿ, ಅರ್ಜಿಯನ್ನು ಇತ್ಯರ್ಥಪಡಿಸಿದೆ. ಆದಷ್ಟು ಶೀಘ್ರದಲ್ಲಿ ಎಲ್ಲ ಅನುಮತಿಗಳನ್ನು ಪಡೆದು ಯೋಜನೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಮೇಕೆದಾಟು ಸ್ಥಳ ಪರಿಶೀಲನೆಗಾಗಿ ಸಮಿತಿ ರಚಿಸಿ ದಕ್ಷಿಣ ಪೀಠ ನೀಡಿದ್ದ ಆದೇಶ ಪ್ರಶ್ನಿಸಿದ್ದ ಕರ್ನಾಟಕ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಪೀಠ ನಿನ್ನೆ ತೀರ್ಪಿ ಕಾಯ್ದಿರಿಸಿತ್ತು. ವಿಚಾರಣೆ ಮುಕ್ತಾಯಗೊಳಿಸಿ ಯೋಜನೆ ಆರಂಭಕ್ಕೆ ಅನುಮತಿ ನೀಡಿದ್ದು, ಚೆನ್ನೈನಲ್ಲಿರುವ ದಕ್ಷಿಣ ಪೀಠದ ದೂರನ್ನು ವಜಾಗೊಳಿಸಿ ಆದೇಶ ನೀಡಿದೆ. ಯೋಜನೆ ಬಗ್ಗೆ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಯೋಜನೆಯಿಂದ 4000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದ್ದು, ಬೆಂಗಳೂರಿಗೆ ಕುಡಿಯುವ ನೀರು ಸಿಗಲಿದೆ. ಈ ನೀರನ್ನು ಕೃಷಿ ಉದ್ದೇಶಗಳಿಗೆ ಬಳಸಿಕೊಳ್ಳುವುದಿಲ್ಲ ಎಂದು ಸಿಎಂ ಸ್ಪಷ್ಟ ಪಡಿಸಿದ್ದಾರೆ.

ತಮಿಳುನಾಡು ಸರ್ಕಾರ ಬಹಳ ಹಿಂದಿನಿಂದಲೂ ಈ ಯೋಜನೆಗೆ ವಿರೋಧಿಸಿ ಎನ್​ಜಿಟಿ ಮುಂದೆ ಅರ್ಜಿ ಸಲ್ಲಿಸಿತ್ತು. ಈ ಸಂಬಂಧ ಶುಕ್ರವಾರ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಯೋಜನೆ ನಿಲ್ಲಿಸುವಂತೆ ಮನವಿ ಮಾಡಿದ್ದರು.

ಮೇಕೆದಾಟು ಯೋಜನೆಯಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆ ಮಾಡಿಲ್ಲ ಹಾಗೂ ಪರಿಸರಕ್ಕೆ ಯಾವುದೇ ರೀತಿಯ ಹಾನಿ ಮಾಡಿಲ್ಲವೆಂದು ರಾಷ್ಟ್ರೀಯ ಹಸಿರು ಪೀಠಕ್ಕೆ (ಎನ್‌ಜಿಟಿ) ಸರ್ಕಾರ ಮನವರಿಕೆ ಮಾಡಿಕೊಟ್ಟಿದ್ದರಿಂದಾಗಿ, ರಾಜ್ಯದ ಪರವಾಗಿ ಪೀಠ ಆದೇಶ ನೀಡಿದೆ ಎಂದು ಕಾನೂನು ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮೇಕೆದಾಟು ವಿಚಾರದ ಕುರಿತು ಇನ್ನು ಸುಪ್ರೀಂ ಕೋರ್ಟಿನಲ್ಲಿ ಇನ್ನು ಕೇಸ್​ ನಡೆಯುತ್ತಿದೆ. ರಾಜ್ಯದ ಹಿತಾಸಕ್ತಿ ಬದ್ಧವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಈಗಾಗಲೇ ಈ ಕುರಿತು ಉತ್ತಮ ವಾದ ಕೂಡ ನಡೆದಿದೆ ಎಂದಿದ್ದಾರೆ.

ಯೋಜನೆಯನ್ನು ನಿಲ್ಲಿಸುವಂತೆ ತಮಿಳುನಾಡು ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ನೆರೆಯ ರಾಜ್ಯವು ಈ ವಿಷಯವನ್ನು ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಮುಂದೆ ತರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಈ ಯೋಜನೆಯಿಂದಾಗಿ ಬೆಂಗಳೂರು ನಗರ ಸೇರಿದಂತೆ ಸುತ್ತಮುತ್ತಲಿನ ಇತರ  ಪ್ರದೇಶಗಳಿಗೂ ನೀರು ಸರಬರಾಜು ಮಾಡಬಹುದು ಎಂದು ಡಿಸಿಎಂ ಡಾ.ಅಶ್ವತ್ಱ ನಾರಾಯಣ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com