ಅನ್ ಲಾಕ್ ಎಂದು ಮೈಮರೆಯಬೇಡಿ, ಪ್ರತಿಯೊಬ್ಬರೂ ಕೊರೋನಾ ಲಸಿಕೆ ಹಾಕಿಸಿಕೊಳ್ಳಿ: ಸಿಎಂ ಯಡಿಯೂರಪ್ಪ ಮನವಿ 

ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ಜಿಲ್ಲಾವಾರು ಪರಿಸ್ಥಿತಿಗಳನ್ನು ಪರಿಗಣಿಸಿ ಸಡಿಲಿಸಲಾಗುತ್ತಿದೆ. ಸಾಮಾನ್ಯ ಜನಜೀವನಕ್ಕೆ ಅನುಕೂಲ ಕಲ್ಪಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆಯಷ್ಟೇ ಹೊರತು ಜನರು ನಿರ್ಲಕ್ಷ್ಯ ವಹಿಸಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಬಿ ಎಸ್ ಯಡಿಯೂರಪ್ಪ
ಸಿಎಂ ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ಜಿಲ್ಲಾವಾರು ಪರಿಸ್ಥಿತಿಗಳನ್ನು ಪರಿಗಣಿಸಿ ಸಡಿಲಿಸಲಾಗುತ್ತಿದೆ. ಸಾಮಾನ್ಯ ಜನಜೀವನಕ್ಕೆ ಅನುಕೂಲ ಕಲ್ಪಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆಯಷ್ಟೇ ಹೊರತು ಜನರು ನಿರ್ಲಕ್ಷ್ಯ ವಹಿಸಬೇಡಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಅನ್ ಲಾಕ್ ಆಗಿದೆಯೆಂದು ಸಾಮಾಜಿಕ ಅಂತರ ಮರೆದು ಬೇಕಾಬಿಟ್ಟಿ ಹೊರಗೆ ಓಡಾಡುವುದು, ನಿರ್ಲಕ್ಷ್ಯ ವಹಿಸುವುದು ಮಾಡಬೇಡಿ, ಕೊರೋನಾ ನಿಯಮ ಸಾಧ್ಯವಾದಷ್ಟು ಪಾಲಿಸಿಕೊಂಡು ದಿನನಿತ್ಯದ ವಹಿವಾಟು ನಡೆಸುವಂತೆ ಸಿಎಂ ಕೋರಿದ್ದಾರೆ. ಸಾಧ್ಯವಾದಷ್ಟು ಮನೆಯಲ್ಲೇ ಇರಿ, ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ. ಹೊರಗೆ ಬರುವಾಗ ಮಾಸ್ಕ್ ಧರಿಸಿ, ಭೌತಿಕ ಅಂತರ ಕಾಯ್ದುಕೊಳ್ಳಿ, ಶುಚಿತ್ವ ಪಾಲಿಸಿ, ಸರದಿ ಬಂದಾಗ ಲಸಿಕೆ ಪಡೆದುಕೊಳ್ಳಿ, ಮುನ್ನೆಚ್ಚರಿಕೆ ವಹಿಸಿ, ನಿಯಮಗಳನ್ನು ಅನುಸರಿಸಿ, ಸರ್ಕಾರದೊಂದಿಗೆ ಸಹಕರಿಸಿ ಎಂದು ಕೇಳಿಕೊಂಡಿದ್ದಾರೆ.

ಕೇಂದ್ರ ಸರ್ಕಾರದ ತೀರ್ಮಾನದಂತೆ ವಿಶ್ವದ ಅತಿದೊಡ್ಡ ಲಸಿಕೆ ಅಭಿಯಾನದಡಿ ಇಂದಿನಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಅಭಿಯಾನ ಆರಂಭವಾಗುತ್ತಿದೆ. ಪ್ರತಿಯೊಬ್ಬರೂ ತಪ್ಪದೆ ಲಸಿಕೆ ಹಾಕಿಸಿಕೊಂಡು ಕೊರೋನಾ ನಿಯಂತ್ರಣಕ್ಕೆ ಸಹಕರಿಸಿ ಎಂದು ಕೇಳಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com