
ಲಸಿಕೆ ಪ್ರಗತಿ ಚಿತ್ರದೊಂದಿಗೆ ಡಾ. ಕೆ. ಸುಧಾಕರ್
ಬೆಂಗಳೂರು: ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನದಲ್ಲಿ ನಮ್ಮ ರಾಜ್ಯ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಸಚಿವರು, ಇಂದು ಒಂದೇ ದಿನದಲ್ಲಿ 78 ಲಕ್ಷಕ್ಕೂ ಅಧಿಕ ಮಂದಿಗೆ ಕೋವಿಡ್ ಲಸಿಕೆ ನೀಡುವ ಮೂಲಕ ಭಾರತ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಕರ್ನಾಟಕದಲ್ಲಿ 10 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ ಎಂದಿದ್ದಾರೆ.
ರಾಜ್ಯದಲ್ಲಿ ಈವರೆಗೂ ಒಟ್ಟಾರೇ,1.96 ಕೋಟಿ ಲಸಿಕೆ ನೀಡಲಾಗಿದೆ ಎಂದು ಡಾ. ಸುಧಾಕರ್ ಹೇಳಿದ್ದಾರೆ.
Karnataka stood second in the entire country in the nationwide Vaccine Maha Abhiyan today. The State administered 10.36 lakh doses in a single day today (till 7 pm). Total doses administered in the State to date are 1.96 Crore.@narendramodi @drharshvardhan @BSYBJP pic.twitter.com/opbtnQ16Ru
— Dr Sudhakar K (@mla_sudhakar) June 21, 2021