ಕೊರೋನಾ ಸಂಕಷ್ಟದ ಈ ಸಂದರ್ಭದಲ್ಲಿ ಯೋಗದ ಪಾತ್ರ ಮಹತ್ವವಾಗಿದೆ: ಸಿಎಂ ಬಿ.ಎಸ್. ಯಡಿಯೂರಪ್ಪ

ಯೋಗಾಭ್ಯಾಸದಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಬಲಗೊಳ್ಳುತ್ತದೆ. ವ್ಯಕ್ತಿತ್ವ ವಿಕಸನ, ಏಕಾಗ್ರತೆಯ ಜೊತೆಗೆ ಸಮಾಜ ನಿರ್ಮಾಣದಲ್ಲಿಯೂ ಯೋಗ ಸಹಕಾರಿಯಾಗಿದೆ‌. ಯೋಗ, ವ್ಯಾಯಾಮಗಳು ನಮ್ಮ ಜೀವನಕ್ರಮವಾಗಿರಲಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಅಧಿಕೃತ ನಿವಾಸ ಕಾವೇರಿಯಲ್ಲಿ ಯೋಗ ಮಾಡುತ್ತಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ ಕೆ ಸುಧಾಕರ್
ಅಧಿಕೃತ ನಿವಾಸ ಕಾವೇರಿಯಲ್ಲಿ ಯೋಗ ಮಾಡುತ್ತಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ ಕೆ ಸುಧಾಕರ್

ಬೆಂಗಳೂರು: ಕೊರೋನಾ ಸಂಕಷ್ಟದ ಈ ಸಂದರ್ಭದಲ್ಲಿ ಯೋಗದ ಪಾತ್ರ ಮಹತ್ವವಾದದು. ಯೋಗಾಭ್ಯಾಸದಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಬಲಗೊಳ್ಳುತ್ತದೆ. ವ್ಯಕ್ತಿತ್ವ ವಿಕಸನ, ಏಕಾಗ್ರತೆಯ ಜೊತೆಗೆ ಸಮಾಜ ನಿರ್ಮಾಣದಲ್ಲಿಯೂ ಯೋಗ ಸಹಕಾರಿಯಾಗಿದೆ‌. ಯೋಗ, ವ್ಯಾಯಾಮಗಳು ನಮ್ಮ ಜೀವನಕ್ರಮವಾಗಿರಲಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಅವರು ಇಂದು ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ 7ನೇ ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಚಾಲನೆ ನೀಡಿದರು. ನಂತರ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರೊಂದಿಗೆ ಸ್ವತಃ ಯೋಗಾಭ್ಯಾಸದಲ್ಲಿ ಪಾಲ್ಗೊಂಡರು. ಈ ಮೂಲಕ ಇಳಿವಯಸ್ಸಿನಲ್ಲಿಯೂ ಯೋಗಾಭ್ಯಾಸ ಮಾಡಿ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಿ, ದೈಹಿಕ-ಮಾನಸಿಕ ಆರೋಗ್ಯಕ್ಕೆ ಯೋಗ, ವ್ಯಾಯಾಮ ಕಸರತ್ತು ಮುಖ್ಯ ಎಂಬುದನ್ನು ತೋರಿಸಿಕೊಟ್ಟರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com