ಕರ್ನಾಟಕ ತುರ್ತು ಪರಿಹಾರ ನಿಧಿ: ರೂ.500 ಕೋಟಿಯಿಂದ ರೂ.2,500 ಕೋಟಿಗೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ

ಕರ್ನಾಟಕ ತುರ್ತು ಪರಿಹಾರ ನಿಧಿಯನ್ನು ರೂ.500 ಕೋಟಿಯಿಂದ ರೂ.2,500 ಕೋಟಿಗೆ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಸೋಮವಾರ ಒಪ್ಪಿಗೆ ನೀಡಿದೆ. 
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ಕರ್ನಾಟಕ ತುರ್ತು ಪರಿಹಾರ ನಿಧಿಯನ್ನು ರೂ.500 ಕೋಟಿಯಿಂದ ರೂ.2,500 ಕೋಟಿಗೆ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಸೋಮವಾರ ಒಪ್ಪಿಗೆ ನೀಡಿದೆ. 

ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. 

ಈ ಕುರಿತು ಮಾಹಿತಿ ನೀಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು, : ಕರ್ನಾಟಕ ತುರ್ತು ಪರಿಹಾರ ನಿಧಿಯನ್ನು ರೂ.500 ಕೋಟಿಯಿಂದ ರೂ.2,500 ಕೋಟಿಗೆ ಹೆಚ್ಚಿಸುವ ಕಾಯ್ದೆಗೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಲಾಗುವುದು. ಕೋವಿಡ್‌ ಕಾರಣ ಮುಂದಿನ ದಿನಗಳಲ್ಲಿ ಖರ್ಚು ಮಾಡುವ ಉದ್ದೇಶದಿಂದ ತುರ್ತುನಿಧಿ ಮೊತ್ತ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ. 

ಕಳೆದ ವರ್ಷ ರಾಜ್ಯ ಸರ್ಕಾರ ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಕರ್ನಾಟಕ ತುರ್ತು ಪರಿಹಾರ ನಿಧಿಯನ್ನು ರೂ.80 ಕೋಟಿಯಿಂದ ರೂ.500 ಕೋಟಿಗೆ ಏರಿಕೆ ಮಾಡಿತ್ತು. ಕರ್ನಾಟಕ ತುರ್ತು ಪರಿಹಾರ ನಿಧಿ ಹೆಚ್ಚಳದಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ಪರಿಹಾರ ನೀಡಲು ಸಹಾಯವಾಗುತ್ತದೆ. 

ಕಳದೆ ವಾರವಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಡವರಿಗೆ ಆರ್ಥಿಕ ಪರಿಹಾರವನ್ನು ಘೋಷಣೆ ಮಾಡಿದ್ದರು. ಆಶಾ ಕಾರ್ಯಕರ್ತೆಯರು, ಆಟೋ ಚಾಲಕರು, ಕ್ಯಾಬ್ ಚಾಲಕರು, ರೈತರು, ಕಟ್ಟಣ ನಿರ್ಮಾಣ ಕಾರ್ಮಿಕರು ಸೇರಿದಂತೆ ಹಲವರಿಗೆ ಪರಿಹಾರ ಘೋಷಣೆ ಮಾಡಿದ್ದರು. ಇದಲ್ಲದೆ, ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ಕುಟುಂಬವನ್ನು ಆರ್ಥಿಕವಾಗಿ ಸಲುಹುವ ವ್ಯಕ್ತಿ ಕೋವಿಡ್‌ನಿಂದ ಮೃತಪಟ್ಟಿದ್ದರೆ ರೂ.1 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com