ಸಂಕಷ್ಟ ಎದುರಿಸುತ್ತಿರುವ ಹೊಟೇಲ್, ರೆಸಾರ್ಟ್ ಗಳ ವಿದ್ಯುತ್ ಬಿಲ್ ಗೆ ವಿನಾಯ್ತಿ ಕೊಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಕೋವಿಡ್-19ನಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಆತಿಥ್ಯ ವಲಯಗಳಾದ ಹೊಟೇಲ್, ರೆಸಾರ್ಟ್ಸ್ ಮತ್ತು ಲಾಡ್ಜ್ ಗಳ ವಿದ್ಯುತ್ ಶುಲ್ಕ ಪಾವತಿಗೆ ವಿನಾಯ್ತಿ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್-19ನಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಆತಿಥ್ಯ ವಲಯಗಳಾದ ಹೊಟೇಲ್, ರೆಸಾರ್ಟ್ಸ್ ಮತ್ತು ಲಾಡ್ಜ್ ಗಳ ವಿದ್ಯುತ್ ಶುಲ್ಕ ಪಾವತಿಗೆ ವಿನಾಯ್ತಿ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಪತ್ರ ಬರೆದಿರುವ ಅವರು, ಹೊಟೇಲ್, ರೆಸಾರ್ಟ್ ಗಳ ಮಾಲೀಕರಿಗೆ ವ್ಯಾಪಾರ-ವಹಿವಾಟುಗಳಿಲ್ಲದೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವುಗಳ ವಿದ್ಯುತ್ ಬಿಲ್ ಪಾವತಿಗೆ ವಿನಾಯ್ತಿ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಅಸಂಘಟಿತ ವಲಯಗಳಿಗೆ ವಿಶೇಷ ಪ್ಯಾಕೇಜ್ ಗೆ ಒತ್ತಾಯಿಸಿದ ಅವರು, ಕೊರೋನಾ ಲಾಕ್ ಡೌನ್ ನಿಂದ ಫೋಟೋಗ್ರಾಫರ್ ಗಳು, ವಿಡಿಯೊಗ್ರಾಫರ್ ಗಳು, ಹೂ ವಿನ್ಯಾಸಕಾರರು ಮತ್ತು ಕಾರ್ಮಿಕರು, ಸಭೆ-ಸಮಾರಂಭಗಳನ್ನು ನಂಬಿಕೊಂಡು ಬದುಕುತ್ತಿರುವ ಜನರಿಗೆ ವಿಪರೀತ ಕಷ್ಟವಾಗಿದೆ. ಅಂತವರ ಕಡೆಗೆ ಸರ್ಕಾರ ಗಮನ ಹರಿಸದಿರುವುದು ದುರದೃಷ್ಟಕರ ಎಂದಿದ್ದಾರೆ.

ಸಾಲ ಹಿಂತಿರುಗಿಸಲು ಸಾಧ್ಯವಾಗದೆ ಸಣ್ಣ ಮತ್ತು ದೊಡ್ಡ ಹೊಟೇಲ್ ಮಾಲೀಕರು ಕಷ್ಟ ಅನುಭವಿಸುತ್ತಿದ್ದಾರೆ. ಕೊರೋನಾ ಸಾಂಕ್ರಾಮಿಕದಿಂದ ಸುಮಾರು 20 ಸಾವಿರ ಹೊಟೇಲ್ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ. ಅವರ ಕುಟುಂಬಸ್ಥರು ಸಂಕಷ್ಟದಲ್ಲಿದ್ದಾರೆ. ಮಕ್ಕಳಿಗೆ ಶಿಕ್ಷಣ ಕೊಡಿಸಲು ಸಾಧ್ಯವಾಗುತ್ತಿಲ್ಲ, ಕೊರೋನಾ ಮೊದಲ ಅಲೆ ಸಂದರ್ಭದಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿದ್ದ ಸರ್ಕಾರದಿಂದ ಅರ್ಧದಷ್ಟು ಫಲಾನುಭವಿಗಳಿಗೂ ಹಣ ಸಿಕ್ಕಿಲ್ಲ. ಇನ್ನೂ ಹಲವರಿಗೆ ಎರಡನೇ ಪ್ಯಾಕೇಜ್ ಸಮಯದಲ್ಲಿ ಕೂಡ ನೆರವು ಸರ್ಕಾರದಿಂದ ದೊರಕಿಲ್ಲ ಎಂದು ಪತ್ರದಲ್ಲಿ ಸಿದ್ದರಾಮಯ್ಯ ಸರ್ಕಾರದ ದೋಷವನ್ನು ತೋರಿಸಿಕೊಟ್ಟಿದ್ದಾರೆ.

ರಾಜ್ಯದ ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ತಲಾ 10 ಸಾವಿರ ರೂಪಾಯಿ ನೆರವು ನೀಡಿ ಎಂದು ಸರ್ಕಾರವನ್ನು ಒತ್ತಾಯಿಸಿರುವ ಅವರು ಸಾಲ ಹಿಂಪಡೆಯಲು ಇಎಂಐ ಪಾವತಿಯನ್ನು ಮುಂದೂಡುವಂತೆ ಬ್ಯಾಂಕುಗಳಿಗೆ ಸೂಚಿಸಿ ಎಂದು ಪತ್ರದಲ್ಲಿ ಮುಖ್ಯಮಂತ್ರಿಗಳನ್ನು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com