ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಕೋವಿಡ್ ಲಸಿಕೆ ಅಭಿಯಾನ: ಡಿಸಿಎಂ ಅಶ್ವಥ ನಾರಾಯಣ

ರಾಜ್ಯದಲ್ಲಿ ಕೋವಿಡ್ ಕಾರ್ಯಪಡೆಯ ಮುಖ್ಯಸ್ಥರಾಗಿರುವ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ ನಾರಾಯಣ, 18 ವರ್ಷಕ್ಕಿಂತ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಕೋವಿಡ್ ಲಸಿಕೆ ಅಭಿಯಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಆರೋಗ್ಯ ವಲಯ ಕಾರ್ಯಕರ್ತರು ಬೆಂಗಳೂರಿನಲ್ಲಿ ಲಸಿಕೆ ನೀಡುತ್ತಿರುವುದು
ಆರೋಗ್ಯ ವಲಯ ಕಾರ್ಯಕರ್ತರು ಬೆಂಗಳೂರಿನಲ್ಲಿ ಲಸಿಕೆ ನೀಡುತ್ತಿರುವುದು

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಕಾರ್ಯಪಡೆಯ ಮುಖ್ಯಸ್ಥರಾಗಿರುವ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ ನಾರಾಯಣ, 18 ವರ್ಷಕ್ಕಿಂತ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಕೋವಿಡ್ ಲಸಿಕೆ ಅಭಿಯಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕಾಲೇಜು ವಿದ್ಯಾರ್ಥಿಗಳಿಗೆ ಮೊದಲ ಲಸಿಕೆ ಡೋಸ್ ಸಿಕ್ಕಿದ ಕೂಡಲೇ ಆಫ್ ಲೈನ್ ತರಗತಿಗಳನ್ನು ಆರಂಭಿಸಲಾಗುವುದು. 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಆದ್ಯತೆಯಾಗಿ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.

ಆಯಾ ಕಾಲೇಜುಗಳಲ್ಲಿ ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು. ಕಾಲೇಜುಗಳು ನೀಡಿರುವ ಐಡಿ ಕಾರ್ಡುಗಳನ್ನು ತೋರಿಸಿ ವಿದ್ಯಾರ್ಥಿಗಳು ಲಸಿಕೆ ಪಡೆದುಕೊಳ್ಳಬಹುದು. ಸಂಸ್ಥೆಯ ಮುಖ್ಯಸ್ಥರು ಮತ್ತು ಮತ್ತೊಬ್ಬ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗುತ್ತದೆ ಎಂದರು.

ಈ ಮಧ್ಯೆ ಕಾಲೇಜು ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ತರಗತಿಗಳು ಮುಂದುವರಿಯುತ್ತಿವೆ. ಆನ್ ಲೈನ್ ತರಗತಿಗಳಿಗೂ ಹಾಜರಾತಿ ಕಡ್ಡಾಯವಾಗಿರುತ್ತದೆ. ಡೆಲ್ಟಾ ಪ್ಲಸ್ ರೂಪಾಂತರಿ ಕೊರೋನಾ ಬಗ್ಗೆ ಸರ್ಕಾರ ಎಚ್ಚರಿಕೆ ವಹಿಸುತ್ತಿದ್ದು ಈಗಿರುವ ಲಸಿಕೆಗಳೇ ಅದರ ವಿರುದ್ಧ ಹೋರಾಡಲು ಪರಿಣಾಮಕಾರಿಯಾಗಿದೆ ಎಂದರು.

ಮಹಿಳೆಯರಿಗೆ ವಿಶೇಷ ಅಭಿಯಾನ: ನಿನ್ನೆ ಡಿಸಿಎಂ ಅಶ್ವಥ ನಾರಾಯಣ ಅವರು ತಮ್ಮ ಕ್ಷೇತ್ರ ಮಲ್ಲೇಶ್ವರದಲ್ಲಿ ಮಹಿಳೆಯರಿಗೆ ವಿಶೇಷ ಲಸಿಕೆ ಅಭಿಯಾನ ಕೈಗೊಂಡಿದ್ದರು. ಡಾ ಸಿ ಎನ್ ಅಶ್ವಥ ನಾರಾಯಣ ಫೌಂಡೇಶನ್ ಮೂಲಕ ಅದನ್ನು ನಡೆಸಲಾಯಿತು. ಸಾವಿರದ 500ಕ್ಕೂ ಹೆಚ್ಚು ಮಹಿಳೆಯರಿಗೆ ಸಂಗೊಳ್ಳಿ ರಾಯಣ್ಣ ಪಾರ್ಕ್ ನಲ್ಲಿ ಲಸಿಕೆ ನೀಡಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com